Advertisement

Anantnag; ಉಗ್ರರ ಅಟ್ಟಹಾಸ: ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮ

08:59 PM Aug 10, 2024 | Team Udayavani |

ಅನಂತ್ ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಶನಿವಾರ(ಆಗಸ್ಟ್ 10) ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

Advertisement

ಕೋಕರ್ನಾಗ್ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಅರಣ್ಯ ಪ್ರದೇಶದಲ್ಲಿ ಶೋಧ ಮತ್ತು ಕೂಂಬಿಂಗ್ ಕಾರ್ಯಾಚರಣೆಯನ್ನು ನಡೆಸಿದ್ದವು. ಶನಿವಾರ ಮುಂಜಾನೆಯಿಂದಲೇ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಭದ್ರತಾ ಪಡೆಗಳ ತಂಡದ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ಆರಂಭವಾಗಿದೆ. ಕಾಡಿನಲ್ಲಿ ಅಡಗಿರುವ ಭಾರೀ ಶಸ್ತ್ರಸಜ್ಜಿತ ಉಗ್ರರು ಜಮ್ಮು ಪ್ರದೇಶದ ದೋಡಾ ಮೂಲಕ ಅನಂತನಾಗ್ ಪ್ರವೇಶಿಸಿದ್ದಾರೆ ಎಂದು ವರದಿಯಾಗಿದೆ.ಸೇನಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next