Advertisement

ಪ್ರವಾಹ ಪೀಡಿತ ಪ್ರದೇಶ ಅಧ್ಯಯನಕ್ಕಾಗಿ 2 ತಂಡ

11:28 PM Aug 06, 2019 | Lakshmi GovindaRaj |

ಬೆಂಗಳೂರು: ರಾಜ್ಯದ ಹಲವೆಡೆ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧ್ಯಯನಕ್ಕಾಗಿ ಕೆಪಿಸಿಸಿ ವತಿಯಿಂದ ಎರಡು ತಂಡ ರಚಿಸಲಾಗಿದೆ. ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ನೇತೃತ್ವದ ಸಮಿತಿಯಲ್ಲಿ ಮಾಜಿ ಸಚಿವರಾದ ಸತೀಶ್‌ ಜಾರಕಿಹೊಳಿ, ಆರ್‌.ಬಿ.ತಿಮ್ಮಾಪುರ, ಉಮಾಶ್ರೀ, ಶಿವಾನಂದ ಪಾಟೀಲ್‌ ಹಾಗೂ ಮಾಜಿ ಸಂಸದ ಪ್ರೊ.ಐ.ಜಿ.ಸನದಿ ಸದಸ್ಯರಾಗಿದ್ದಾರೆ.

Advertisement

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ನೇತೃತ್ವದ ಸಮಿತಿಯಲ್ಲಿ ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆ, ಶರಣಬಸಪ್ಪ ದರ್ಶನಾಪುರ್‌, ರಾಜ್ಯಸಭೆ ಸದಸ್ಯ ನಾಸೀರ್‌ ಹುಸೇನ್‌, ಶಾಸಕ ಅಜಯ್‌ಸಿಂಗ್‌, ವಿಧಾನಪರಿಷತ್‌ ಸದಸ್ಯ ಎನ್‌.ಎನ್‌.ಬೋಸರಾಜು ಅವರು ಸದಸ್ಯರಾಗಿದ್ದಾರೆ. ಎರಡೂ ತಂಡಗಳಿಗೆ ಪ್ರವಾಹ ಪೀಡಿತ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವರದಿ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸುದ್ದಿಗಾರರಿಗೆ ತಿಳಿಸಿದರು.

ಸಮಿತಿಯ ವರದಿಯ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು. ನಾವು ಎಲ್ಲವನ್ನೂ ವಿರೋಧ ಮಾಡುವುದಿಲ್ಲ. ಆದರೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆ, ಸರ್ಕಾರದ ವತಿಯಿಂದ ಕೈಗೊಂಡಿರುವ ಕ್ರಮಗಳ ವಾಸ್ತವಾಂಶ ಜನರ ಮುಂದಿಡುತ್ತೇವೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಿದೆ ಎಂಬ ವಿಶ್ವಾಸವಿದೆ. ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಒಬ್ಬರೇ ಇರುವುದರಿಂದ ಎಲ್ಲವನ್ನೂ ನೋಡಿಕೊಳ್ಳಬೇಕಾಗಿದೆ. ಆದರೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂಬುದು ನಮ್ಮ ಒತ್ತಾಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next