Advertisement

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

11:44 AM Oct 05, 2024 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಶನಿವಾರ(ಅ.೫) ಬೆಳಿಗ್ಗೆ ಕುಪ್ವಾರದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

Advertisement

ಶನಿವಾರ ಮುಂಜಾನೆ ಭದ್ರತಾ ಪಡೆ ನಡೆಸಿದ “ಆಪರೇಷನ್ ಗುಗಲ್ಧರ್’ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ ಅಲ್ಲದೆ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನೆ ತಿಳಿಸಿದೆ.

ಅಕ್ಟೋಬರ್ 4 ರಂದು ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ವೇಳೆ ಕಾರ್ಯಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಒಳನುಸುಳುತ್ತಿದ್ದ ಭಯೋತ್ಪಾದಕರಿಗೆ ಸೇನೆ ಎಚ್ಚರಿಕೆ ನೀಡಿದೆ ಆದರೆ ಇದನ್ನು ಧಿಕ್ಕರಿಸಿ ಮುನ್ನುಗ್ಗಲು ಯತ್ನಿಸಿದ ಭಯೋತ್ಪಾದಕರ ಮೇಲೆ ಸೇನೆ ಗುಂಡಿನ ದಾಳಿ ನಡೆಸಿ ಅವರಲ್ಲಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸೇನೆ ಇಂದು(ಶನಿವಾರ) ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ ಅಲ್ಲದೆ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸೇನೆಯ ಜಂಟಿ ತಂಡವು ನೇತೃತ್ವ ವಹಿಸಿದೆ ಎಂದು ಹೇಳಿದೆ.

Advertisement

ಕುಪ್ವಾರದಲ್ಲಿ ನೆಲಬಾಂಬ್ ಸ್ಫೋಟ:
ಶುಕ್ರವಾರ, ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನೆಲಬಾಂಬ್ ಸ್ಫೋಟದಲ್ಲಿ ಇಬ್ಬರು ಸೇನಾ ಯೋಧರು ಗಾಯಗೊಂಡಿದ್ದಾರೆ. “ಉತ್ತರ ಕಾಶ್ಮೀರ ಜಿಲ್ಲೆಯ ಟ್ರೆಹ್ಗಾಮ್ ಪ್ರದೇಶದಲ್ಲಿ ಎಲ್ಒಸಿ ಉದ್ದಕ್ಕೂ ಗುಗಲ್ದಾರಾದಲ್ಲಿ ಗಸ್ತು ತಿರುಗುತ್ತಿದ್ದಾಗ ಶುಕ್ರವಾರ(ಅ. ೪) ಮುಂಜಾನೆ ಇಬ್ಬರು ಸೇನಾ ಯೋಧರು ನೆಲಬಾಂಬ್ ಸ್ಫೋಟಗೊಂಡು ಗಾಯಗೊಂಡಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರೂ ಯೋಧರನ್ನು ಡ್ರಗ್ಮುಲ್ಲಾದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next