Advertisement

ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆ: ಮುಂದುವರೆದ ಕಾರ್ಯಾಚರಣೆ !

08:47 AM Dec 09, 2020 | Mithun PG |

ಪುಲ್ವಾಮ:  ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕೆನ್ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ.

Advertisement

ಬುಧವಾರ ನಸುಕಿನ ವೇಳೆ ನಡೆದ ಈ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಹತ್ಯೆಮಾಡಲಾಗಿದೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.

ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ನಿರಂತರ ಗುಂಡಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿದ್ದ ಕೆಲವೊಂದು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಸ್ಥಳದಲ್ಲಿ ಪೊಲೀಸರು ಮತ್ತು ಭದ್ರತಾಪಡೆಗಳು  ಕಾರ್ಯಾಚರಣೆ ಮುಂದುವರೆಸಿದ್ದು, ಇನ್ನೂ ಹಲವು ಉಗ್ರರು ಅಡಗಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next