Advertisement

ಜಮ್ಮು-ಕಾಶ್ಮೀರ; ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

09:21 AM Jul 28, 2019 | Nagendra Trasi |

ಜಮ್ಮು-ಕಾಶ್ಮೀರ:ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ದಕ್ಷಿಣ ಕಾಶ್ಮೀರ ಜಿಲ್ಲೆಯ ಬೋನ್ ಬಝಾರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಗೆ ಇಳಿದಿದ್ದವು. ಈ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಿದಾಗ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವುದಾಗಿ ವರದಿ ವಿವರಿಸಿದೆ.

ಕಳೆದ ಐದು ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಸುಮಾರು 960ಕ್ಕೂ ಅಧಿಕ ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಕೇಂದ್ರದ ರಾಜ್ಯ ಗೃಹ ಖಾತೆ ಸಚಿವ ಜಿ.ಕೃಷ್ಣ ರೆಡ್ಡಿ ಮಾಹಿತಿ ನೀಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next