Advertisement

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರ ಸಾವು

08:23 AM Apr 27, 2020 | Nagendra Trasi |

ಶ್ರೀನಗರ್: ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಇಬ್ಬರು ಉಗ್ರರ ಗುರುತು ಇನ್ನಷ್ಟೇ ತಿಳಿದುಬರಬೇಕಾಗಿದೆ ಎಂದು ವರದಿ ತಿಳಿಸಿದೆ.

Advertisement

ಪೊಲೀಸರ ಮಾಹಿತಿ ಪ್ರಕಾರ, ಆರ್ಮಿ 9 ರಾಷ್ಟ್ರೀಯ ರೈಫಲ್ಸ್, ಸೆಂಟ್ರಲ್ ರಿಸರ್ವ್ ಪೊಲೀಸ್ ಪಡೆ ಹಾಗೂ ಕುಲ್ಗಾಮ್ ಪೊಲೀಸ್ ಜಂಟಿ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಭದ್ರತಾ ಪಡೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.

ಈ ಪ್ರದೇಶದಲ್ಲಿ ಇಬ್ಬರು, ಮೂವರು ಉಗ್ರರು ಅಡಗಿದ್ದಾರೆಂದು ಶಂಕಿಸಲಾಗಿದೆ. ಇಡೀ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾ ಮೂಲಗಳು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next