Advertisement

ಜಮ್ಮು-ಕಾಶ್ಮೀರ:ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರ ಸಾವು,ಶೋಧ ಕಾರ್ಯ ಮುಂದುವರಿಕೆ

02:57 PM Jul 11, 2022 | Team Udayavani |

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಆವಂತಿಪೋರಾದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತ್ಯೆಗೀಡಾಗಿರುವ ಘಟನೆ ಸೋಮವಾರ (ಜುಲೈ 11) ನಡೆದಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.

Advertisement

ಇದನ್ನೂ ಓದಿ:ಕಾರ್ಕಳ: ಬೋಳ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು; ಪಂಚಲೋಹದ ಬಲಿಮೂರ್ತಿ ಕಳವು

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ವಂಡಕಾಪೋರಾದಲ್ಲಿ ಎನ್ ಕೌಂಟರ್ ನಡೆದಿದೆ. ಸಾವಿಗೀಡಾದವರಲ್ಲಿ ಒಬ್ಬ ಉಗ್ರನನ್ನು ಕೈಸೆರ್ ಕೋಕಾ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಉಗ್ರನ ಗುರುತನ್ನು ಇನ್ನಷ್ಟೇ ಪತ್ತೆ ಮಾಡಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಒಂದು ಅಮೆರಿಕ ನಿರ್ಮಿತ ರೈಫಲ್, ಒಂದು ಪಿಸ್ತೂಲ್ ಸೇರಿದಂತೆ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ಭಾರತೀಯ ಸೇನೆ, ಪೊಲೀಸರು ಹಾಗೂ ಸಿಆರ್ ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆಂದು ವರದಿ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next