ನವದೆಹಲಿ:ಲೇಹರ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದ ನಂತರ ಪುಲ್ವಾಮಾದಲ್ಲಿ ಇಬ್ಬರು ಉಗ್ರರು ಜಮ್ಮು-ಕಾಶ್ಮೀರ ಪೊಲೀಸರಿಗೆ ಶರಣಾಗಿರುವುದಾಗಿ ಅಧಿಕಾರಿಗಳು ಶನಿವಾರ(ಜನವರಿ 30, 2021) ತಿಳಿಸಿದ್ದಾರೆ.
ಇದನ್ನೂ ಓದಿ:ಬಲಾ ಬೊಲ್ಲ.. ಬಲಾ ಕಾಟಿ… ಮತ್ತೆ ಮೊಳಗಲು ಸಿದ್ದವಾಗಿದೆ ಕಂಬಳದ ಕಹಳೆ
ಗುಂಡಿನ ಚಕಮಕಿ ವೇಳೆ ಉಗ್ರರು ಗಾಯಗೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಅಧಿಕಾರಿ ಟ್ವೀಟ್ ಮಾಡಿದ್ದು, ಉಗ್ರರು ಎಕೆ 47 ರೈಫಲ್ಸ್ ಜತೆ ಶರಣಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಕಾಕಾಪೋರಾದ ಲೇಹರ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ದಾಳಿ ನಂತರ ಭದ್ರತಾ ಪಡೆ ಅಡಗಿಕೊಂಡಿದ್ದ ಉಗ್ರರ ಮೇಲೆ ಪ್ರತಿದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಇಬ್ಬರು ಗಾಯಗೊಂಡಿದ್ದು, ನಂತರ ಶರಣಾಗಿರುವುದಾಗಿ ವರದಿ ಹೇಳಿದೆ.