Advertisement

ಗುತ್ತಿಗೆ ಆಧಾರದ ಮೇಲೆ 2 ಸಾವಿರ ವೈದ್ಯರನ್ನು ನೇಮಕ ಮಾಡಲು ಕ್ರಮ

09:15 PM Aug 05, 2021 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ನೆರೆ ಹಾವಳಿಯನ್ನು ತಡೆಗಟ್ಟಲು ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Advertisement

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಕೋವಿಡ್-19 ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ನಂತರ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಉತ್ತಮವಾಗಿ ಕಾರ್ಯನಿರ್ವಹಿಸಿದೆಯೆಂದ ಸಚಿವರು ಹಿಂದೆ 1500 ವೈದ್ಯರನ್ನು ನೇಮಕ ಮಾಡಿಕೊಂಡಿದ್ದರಿಂದ ಬಹುತೇಕ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯನ್ನು ನೀಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೇವೆಯನ್ನು ಕಡ್ಡಾಯಗೊಳಿಸಿ ಗುತ್ತಿಗೆ ಆಧಾರದ ಮೇರೆಗೆ 2 ಸಾವಿರ ವೈದ್ಯರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿದೆಯೆಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಬಡವರು ಮತ್ತು ರೈತರ ಕಲ್ಯಾಣಕ್ಕಾಗಿ ವಿಶೇಷ ಆದ್ಯತೆ ನೀಡಿದೆ ಜೊತೆಗೆ ರೈತರ ಮಕ್ಕಳು ಉನ್ನತ ಶಿಕ್ಷಣ ಪಡೆಯುವ ಸಲುವಾಗಿ ವಿದ್ಯಾರ್ಥಿವೇತನವನ್ನು ನೀಡುವ ಯೋಜನೆಯನ್ನು ಘೋಷಣೆ ಮಾಡಿ ಅದಕ್ಕಾಗಿ 1 ಸಾವಿರ ಕೋಟಿ ರೂಗಳನ್ನು ಮೀಸಲಿಟ್ಟು ಯೋಜನೆಯ ಅನುಷ್ಠಾನಕ್ಕಾಗಿ ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿ ಕೊರೊನಾ ಸೋಂಕು ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಮುಖ್ಯಮಂತ್ರಿ ಯಾವ ಖಾತೆ ನೀಡುತ್ತಾರೆ ಅದನ್ನು ನಿರ್ವಹಣೆ ಮಾಡುತ್ತೇನೆ ಎಂದ ಸಚಿವರು ಎರಡನೇ ಬಾರಿಗೆ ಸಚಿವರಾಗಿ ನೇಮಕ ಮಾಡಿದಕ್ಕಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಪಕ್ಷದ ಮುಖಂಡರಿಗೆ ಹಾಗೂ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದರು.

ಕೋವಿಡ್ ನಿಯಂತ್ರಣ ಮಾಡಬೇಕು ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಸಿಎಂ ಸೂಚನೆ ನೀಡಿದ್ದಾರೆ ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳು ಮತ್ತು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಬಿತ್ತನೆಬೀಜ ಮತ್ತು ರಸಗೊಬ್ಬರದ ಕೊರತೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Advertisement

ಮುಂದಿನ ಒಂದು ತಿಂಗಳಿಗಾಗಿ ಒಂದೂವರೆ ಕೋಟಿ ಲಸಿಕೆಯ ಬೇಡಿಕೆ ಇಡಲಾಗಿತ್ತು. ಈವರೆಗೆ ರಾಜ್ಯದಲ್ಲಿ 3.9 ಕೋಟಿ ಲಸಿಕೆ ನೀಡಿದ್ದು, ಆಗಸ್ಟ್ ಅಂತ್ಯಕ್ಕೆ 4 ಕೋಟಿ ಹಾಗೂ ಸೆಪ್ಟೆಂಬರ್ ಅಂತ್ಯಕ್ಕೆ ಐದೂವರೆ ಕೋಟಿ ಲಸಿಕೆ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದ ಸಚಿವರು ಯಾವುದೇ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.5 ಕ್ಕಿಂತ ಹೆಚ್ಚಿಲ್ಲ. ಕೇರಳಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ವಹಿಸಲಾಗಿದೆ ಅದೇ ರೀತಿ ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ವಿಶೇಷ ಜಾಗೃತಿ ವಹಿಸಲಾಗಿದೆಯೆಂದರು ಸರ್ಕಾರ ವಹಿಸಿದೆ ಎಂದರು.

ಚೇಳೂರು ಮಂಚೇನಹಳ್ಳಿ ತಾಲೂಕುಗಳ ಅಭಿವೃಧ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಅದನ್ನು ಕಡೆಗಣಿಸಿಲ್ಲವೆಂದು ಸ್ಪಷ್ಟಪಡಿಸಿದ ಸಚಿವರು ಮಂಚೇನಹಳ್ಳಿಗೆ ಸಾರ್ವಜನಿಕ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಂಜೂರು ಮಾಡಲಾಗಿದೆ ಅದೇ ಆಡಳಿತ ನಿರ್ವಹಣೆಗಾಗಿ ಮಿನಿ ವಿಧಾನಸೌಧ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಅದೇ ರೀತಿಯಲ್ಲಿ ಚೇಳೂರು ತಾಲೂಕಿನ ಅಭಿವೃಧ್ಧಿಗೂ ವಿಶೇಷ ಆದ್ಯತೆ ನೀಡಲಾಗಿದೆ ಅದನ್ನು ಅಭಿವೃಧ್ಧಿಗೊಳಿಸಲಾಗುವುದೆಂದರು.

ಎಲ್ಲ ಶಾಸಕರಿಗೆ ಸಚಿವರಾಗುವ ಅರ್ಹತೆ ಇದೆ ಪ್ರಾದೇಶಿಕ ಸಮತೋಲನ ನೋಡಿಕೊಂಡು ಸಂಪುಟ ರಚನೆಯಾಗುತ್ತದೆ. ಅವಕಾಶ ವಂಚಿತರಿಗೆ ಮುಂದೆ ಸೂಕ್ತ ಸ್ಥಾನವನ್ನು ಪಕ್ಷ ನೀಡಲಿದೆ ರಾಜ್ಯ ಸರ್ಕಾರ ಪ್ರಾಮಾಣಿಕೆ ದಕ್ಷತೆಯಿಂದ ಕೆಲಸ ಮಾಡಲಿದೆ ಪ್ರಧಾನಮಂತ್ರಿಗಳ ಸೂಚನೆಯಂತೆ ಮಿನಿಮಮ್ ಗೌರನಮೆಂಟ್ ಮ್ಯಾಕ್ಸಿಮಮ್ ಗೌರನೆನ್ಸ್ ಎಂಬಂತೆ ಸರ್ಕಾರ ಕಾರ್ಯನಿರ್ವಹಿಸುತ್ತದೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಾಶಾಸನವನ್ನು ಸಹ ಹೆಚ್ಚಿಸಲಾಗಿದೆ ರೈತರು, ಬಡವರು ದೀನದಲಿತರ,ಹಿಂದುಳಿದ ವರ್ಗಗಳ ಕಲ್ಯಾಣ ಮಾಡುವುದೇ ಸರ್ಕಾರದ ಗುರಿಯಾಗಿದೆಯೆಂದರು.

ಪ್ರವಾಸಿ ತಾಣಗಳಲ್ಲಿ ನಿಷೇಧ; ಜಿಲ್ಲೆಯ ನಂದಿ ಬೆಟ್ಟ ಸೇರಿದಂತೆ ಪ್ರವಾಸಿ ತಾಣಗಳಲ್ಲಿ ವೀಕೆಂಡ್ ನಿಷೇಧಿಸಿದರು ಜನ ಹೆಚ್ಚಾಗಿ ಬರುತ್ತಿದ್ದಾರೆ ಈ ಕುರಿತು ಜನರಲ್ಲಿ ವ್ಯಾಪಕವಾಗಿ ಅರಿವು ಮತ್ತು ಜಾಗೃತಿಮೂಡಿಸಿ ಹೆಚ್ಚಿನ ಜನ ಸೇರದಿರಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಮತ್ತು ಸಂಪುಟ ರಚನೆಯಾದರೆ ಮಧ್ಯಂತರ ಚುನಾವಣೆ ಎದುರಾಗಲಿಯೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕನಸು ನನಸಾಗಲ್ಲ. ಸಿದ್ದರಾಮಯ್ಯನವರು ಕನಸು ಕಾಣುತ್ತಲೇ ಇರಲಿ ಅವರ ಕನಸು ಯಾವತ್ತು ನನಸಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಸಿಎಂ ಬದಲಾವಣೆ ಸಂಪುಟ ರಚನೆ ಮಾಡಿದ್ದು, ಬೆಟ್ಟ ಅಗೆದು ಇಲಿ ಹಿಡಿದ್ರು ಎಂಬ ಹೇಳಿಕೆಗೆ, ಸಿಎಂ ಬದಲಾವಣೆ ಸಂಪುಟ ರಚನೆ ಬಿಜೆಪಿ ಪಕ್ಷದ ತೀರ್ಮಾನ. ನಮ್ಮ ಪಕ್ಷ ಹಾಗೂ ನಾಯಕರ ತೀರ್ಮಾನ. ಸಿದ್ದರಾಮಯ್ಯನವರಿಗೆ ಯಾಕೆ ಈ ಉಸಾಬರಿ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಅವರಿಗೇನು ಈ ವಿಚಾರ ಅಗತ್ಯ ಇಲ್ಲ. ಈ ಸರ್ಕಾರ ಆಡಳಿತ ಹೇಗೆ ಕೊಡುತ್ತದೆ ಅಂತ ವ್ಯಾಖ್ಯಾನ ಕೊಡಲಿ. 2- 3 ತಿಂಗಳು ಸಿಎಂ ಹೇಗೆ ವ್ಯವಹರಿಸುತ್ತಾರೆ ಅಂತ ನೋಡುತ್ತೇವೆ ಎಂದು ಅವರೇ ಹೇಳಿದರು. ಆದರೆ ಈಗ ಎರಡೇ ದಿನಕ್ಕೆ ಈ ರೀತಿ ಮಾತಾನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುಧ್ಧ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next