Advertisement
ಮೂರನೇ ಸರಕು ಸಾಗಣೆ ರೈಲು ಕೂಡ ಅಪಘಾತದಲ್ಲಿ ಸಿಲುಕಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ತಿಳಿಸಿದ್ದಾರೆ. ಹೌರಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಬೆಂಗಳೂರಿನಿಂದ ಕೋಲ್ಕತಾಗೆ ಹೋಗುತ್ತಿದ್ದ ಮತ್ತೊಂದು ರೈಲಿನ ಹಳಿತಪ್ಪಿದ ಬೋಗಿಗಳಿಗೆ ಢಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
Related Articles
Advertisement
ಪ್ರಧಾನಿ ತೀವ್ರ ಸಂತಾಪ
ದುರಂತದ ಕುರಿತು ಪ್ರಧಾನಿ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಕಂಗಾಲಾಗಿದ್ದೇನೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜತೆ ಮಾತನಾಡಿದ್ದೇನೆ. ಪರಿಸ್ಥಿತಿಯ ಕುರಿತು ವಿವರ ತೆಗೆದುಕೊಂಡಿದ್ದೇನೆ. ದುರಂತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತ ಸ್ಥಳಕ್ಕೆ ತೆರಳುತ್ತಿದ್ದಾರೆ. ಸಂತ್ರಸ್ತರಿಗೆ ಪರಿಹಾರವನ್ನೂ ಘೋಷಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂ.ಪರಿಹಾರ ಘೋಷಿಸಿದ್ದಾರೆ.
ರಾಷ್ಟ್ರಪತಿ ಸಂತಾಪ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ”ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ದುರದೃಷ್ಟಕರ ರೈಲು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ನನ್ನ ಹೃದಯವು ದುಃಖಿತ ಕುಟುಂಬಗಳಿಗೆ ಮಿಡಿಯುತ್ತದೆ. ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.”ಎಂದು ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಸಂತಾಪ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ರೈಲ್ವೆ ಇಲಾಖೆ ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದೆ
Howrah Helpline Number: 033-26382217 Kharagpur Helpline Number: 8972073925 & 9332392339 Balasore Helpline Number: 8249591559 & 7978418322 Shalimar Helpline Number: 9903370746