Advertisement

2 ವರ್ಷದ ಮಗು ಸಾವು: ಹುಬ್ಬಳ್ಳಿಯ ಕಿಮ್ಸ್ ಎದುರು ಪ್ರತಿಭಟನೆ

02:30 PM Feb 18, 2022 | Team Udayavani |

ಹುಬ್ಬಳ್ಳಿ: ಎರಡು ವರ್ಷದ ಮಗುವಿಗೆ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದೆ ಮಗುವಿನ ಸಾವಿಗೆ ಕಾರಣವಾಗಿದ್ದಾರೆ ಎಂದು‌ ಆರೋಪಿಸಿ ಪಾಲಕರು ಹಾಗೂ ಕುಟುಂಬದವರು ಶುಕ್ರವಾರ ಕಿಮ್ಸ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

Advertisement

ರಕ್ತನಾಳ ಗಂಟು ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದರು. ಅದು ವಿಫಲವಾಗಿ ಮಗು ಮೃತ ಪಟ್ಟಿದೆ ಎಂಬುದು ಪಾಲಕರು ಆರೋಪಿಸಿದ್ದಾರೆ.

ಹುಟ್ಟಿನಿಂದ ಮಗುವಿಗೆ ಬಾಯಲ್ಲಿ ಗಂಟು ಇತ್ತು. ಎರಡು ವರ್ಷದ ನಂತರ ಅದನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲು ವೈದ್ಯರು ಸೂಚಿಸಿದ್ದರು. ಅದರಂತೆ ಫೆ. 16 ರಂದು ಕಿಮ್ಸ್’ಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಸಂದರ್ಭ ವೈದ್ಯರ ನಿರ್ಲಕ್ಷದಿಂದ ಮಗು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದೆ ಎಂದು ತಾಜ್ ನಗರದ ನಿವಾಸಿ ಮಗುವಿನ ತಂದೆ ಸಂಜೀವ ಚೌಧರಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮಿಂದ ಅನುಮತಿ ಪಡೆಯದೇ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರ ಚಿಕಿತ್ಸೆ ನಡೆಸಿದರೆ ಮಗು ಬದುಕಿರುವ ಸಾಧ್ಯತೆ ಬಗ್ಗೆಯೂ ಯಾವ ಮಾಹಿತಿ ನೀಡಿಲ್ಲ. ಆಸ್ಪತ್ರೆಗೆ ದಾಖಲಿಸಿದ ಸಂದರ್ಭ ಮಗಳು ಬೆಡ್ ಮೇಲೆ ನಗುತ್ತ, ಚಟುವಟಿಕೆಯಿಂದಲೇ ಇದ್ದಳು. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಅವಳು ಮೃತಪಟ್ಟಿದ್ದಾಳೆ’ ಎಂದು ತಾಯಿ ಕೀರ್ತಿ ಚೌಧರಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಹಟ್ಟಿ ಚಿನ್ನದ ಗಣಿ: 700 ಅಡಿ ಆಳದಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು

Advertisement

ಈ ಕುರಿತು ಪ್ರತಿಕ್ರಿಯಿಸಿದ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಮಗುವಿನ ಬಾಯಲ್ಲಿ ಗಂಟು ದೊಡ್ಡದಾಗಿತ್ತು. ವೈದ್ಯರಾದ ಡಾ.ರಾಜಶೇಖರ ಅವರು ಪರೀಕ್ಷೆಗೆ ಒಳಪಡಿಸಿ, ಅದನ್ನು ರಕ್ತನಾಳ ಗಂಟು ಎಂದು ಪತ್ತೆ ಹಚ್ಚಿದ್ದರು. ಅದಕ್ಕೆ ಪ್ರಾಥಮಿಕ ಚಿಕಿತ್ಸೆ ಎಂದು ಒಂದು ಇಂಜೆಕ್ಸನ್ ಮಾಡಲಾಗಿತ್ತು. ಆಗ ಅಧಿಕ ರಕ್ತಸ್ರಾವ ಆಗಿದೆ. ಸುಚಿರಾಯು ಆಸ್ಪತ್ರೆಗೆ ಕಳುಹಿಸಿ ಎಂಬೊಲೈಸ್ ಮಾಡಿ ರಕ್ತ ಸ್ರಾವ ನಿಲ್ಲಿಸಲಾಗಿತ್ತು. ನಂತರ ಪುನಃ ಕಿಮ್ಸ್’ಗೆ ತಂದು ಐಸಿಯುನಲ್ಲಿ ದಾಖಲಿಸಿದ್ದೇವೆ. 24 ಗಂಟೆ ನಂತರ ಎಂಬೋಲೈಸ್ ತೆಗೆದಾಗ ಮತ್ತೆ ರಕ್ತ ಸ್ರಾವವಾಗಿದೆ. ಮಗುವಿಗೆ ಆರು ಬಾಟಲಿ ರಕ್ತ ನೀಡಿದ್ದೇವೆ. ನಮ್ಮಿಂದ‌ ಯಾವುದೇ ನಿರ್ಲಕ್ಷ್ಯ ಆಗಿಲ್ಲ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next