ಮಧ್ಯಪ್ರದೇಶ: ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 2 ವರ್ಷದ ಹುಲಿಯ ಶವವೊಂದು ಕುತ್ತಿಗೆಗೆ ಉರುಳು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉತ್ತರ ಅರಣ್ಯ ವಿಭಾಗದ ಪನ್ನಾ ವ್ಯಾಪ್ತಿಯ ಲಕ್ಷ್ಮೀಪುರದಿಂದ ವಿಕ್ರಮಪುರ ಅರಣ್ಯಪ್ರದೇಶದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮಾಹಿತಿ ಬಂದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ.ಹುಲಿಯ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ.
ಯಾರೋ ಕಾಡು ಪ್ರಾಣಿ ಬೇಟೆಗೆ ಉರುಳು ಇಟ್ಟಿದ್ದು ಅದಕ್ಕೆ ಹುಲಿ ಸಿಕ್ಕಿ ಬಿದ್ದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ, ಅಲ್ಲದೆ ಕಳೆದ ಶನಿವಾರ ಚಂದ್ರಾಪುರ ಜಿಲ್ಲೆಯ ತಡೋಬಾ ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದಲ್ಲಿ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿದ್ದವು ಎನ್ನಲಾಗಿದೆ.
ಮರಿಗಳ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ಅವು ಹುಲಿಗಳ ದಾಳಿಯಿಂದಲೇ ಮರಿಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ತನಿಖೆ ನಡೆಸುವುದಾಗಿ ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: ಭಾರತದೆದುರು 7 ನೇ ಕ್ರಮಾಂಕದಲ್ಲಿ ಬಂದು ಭರ್ಜರಿ ಶತಕ ಸಿಡಿಸಿದ ಮೆಹಿದಿ ಹಸನ್ !