Advertisement

20 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು

04:06 AM Apr 03, 2019 | mahesh |

ಹುಬ್ಬಳ್ಳಿ: ನನ್ನ ರಾಜಕೀಯ ಅನುಭವದ ವಿಶ್ಲೇಷಣೆ ಪ್ರಕಾರ ಈ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿಕೂಟವು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಸೃಷ್ಟಿ ಯಾಗಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾ ರದ ಐದು ವರ್ಷಗಳ ಆಡಳಿತದಿಂದ ಜನರು ಭ್ರಮ ನಿರಸನಗೊಂಡಿದ್ದಾರೆ. ರಾಹುಲ್‌ ಗಾಂಧಿ ದಕ್ಷಿಣ
ಭಾರತ ಅದರಲ್ಲೂ ಕರ್ನಾಟಕದಿಂದ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದ್ದೆವು. ನಮ್ಮಂತೆಯೇ ಕೇರಳದ ನಾಯಕರೂ ಬೇಡಿಕೆ ಇಟ್ಟಿದ್ದರು. ರಾಜಕೀಯ ಲೆಕ್ಕಾಚಾರದ ಪ್ರಕಾರ ಕೇರಳದಿಂದ ಸ್ಪರ್ಧಿಸಿದರೆ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ ಎನ್ನುವ ಕಾರಣಕ್ಕೆ ಅಮೇಠಿ ಜತೆಗೆ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದರು.

Advertisement

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಎಂದಿಗೂ ಅದು ನಮ್ಮ ದೇಶದಲ್ಲಿ ಇರುತ್ತದೆ. ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎನ್ನುವುದರಲ್ಲಿ ಅರ್ಥವಿಲ್ಲ.
●ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next