Advertisement

ಪಾಕಿಸ್ತಾನದಲ್ಲಿ ರಾಜಕೀಯ ಸಭೆ ಗುರಿಯಾಗಿಸಿ ಆತ್ಮಾಹುತಿ ದಾಳಿ; ಕನಿಷ್ಠ 40 ಮೃತ್ಯು

08:53 PM Jul 30, 2023 | Team Udayavani |

ಬಜೌರ್ : ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂನ ವರ್ಕರ್ಸ್ ಕನ್ವೆನ್ಶನ್ ಅನ್ನು ಗುರಿಯಾಗಿಸಿಕೊಂಡು ಭಾನುವಾರ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 40  ಜನರು ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡಿದ್ದಾರೆ.

Advertisement

ಬಜೌರ್‌ನ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ಕಾರ್ಯಕರ್ತರ ಸಮಾವೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ.

ಮೌಲಾನಾ ಫಜ್ಲುರ್ ರೆಹಮಾನ್ ಅವರ ಜಮಿಯತ್ ಉಲೇಮಾ ಇಸ್ಲಾಂ ಪಕ್ಷದ ಕಾರ್ಯಕರ್ತರ ಸಮಾವೇಶವು ಬಜೂರ್ ಜಿಲ್ಲೆಯ ರಾಜಧಾನಿ ಖಾರ್‌ನ ಹೊರವಲಯದಲ್ಲಿ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಜೀರ್ ಖಾನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಪ್ರಮುಖ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಾನೂನು ಜಾರಿ ಸಂಸ್ಥೆಗಳು ಪ್ರದೇಶವನ್ನು ಸುತ್ತುವರಿದಿವೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next