Advertisement
ಯವತ್ಮಾಲ್ ಜಿಲ್ಲೆಯ ಘಟಾಂಜಿ ತಾಲೂಕಿನ ವಿದ್ಯಾರ್ಥಿಗಳ ಹಾಸ್ಟೆಲ್ ನನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿತ್ತು. ಅಲ್ಲಿ ಆರೈಕೆಯಲ್ಲಿದ್ದ ಸೋಂಕಿತರು ತಪ್ಪಿಸಿಕೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿ ಡಾ. ಸಂಜಯ್ ಪುರಮ್ ಮಾಹಿತಿ ನೀಡಿದ್ದಾರೆ.
Related Articles
Advertisement
ಆ ಎಲ್ಲಾ 19 ರೋಗಿಗಳು ಮತ್ತು ಇನ್ನೊಬ್ಬ ವ್ಯಕ್ತಿ ಶನಿವಾರ ಪರಾರಿಯಾಗಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸದ್ಯಕ್ಕೆ ಅವರ ವಿರುದ್ಧ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಅವರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.
ಜಿಲ್ಲೆಯಲ್ಲಿ ವೈರಲ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತವೆ. ಕೋವಿಡ್ ಕೇರ್ ನಿಂದ ತಪ್ಪಿಸಿಕೊಂಡ ಸೋಂಕಿತರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ”
ಘಟನೆಯ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗುವುದು ಮತ್ತು ತಪ್ಪಿತಸ್ಥರೆಂದು ಪರಿಗಣಿಸಲ್ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಇನ್ನು, ಶನಿವಾರ, ಜಿಲ್ಲೆಯಲ್ಲಿ 1,163 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ 46,704 ಪ್ರಕರಣಗಳು ದಾಖಲಾಗಿವೆ.
ವೈರಲ್ ಸೋಂಕಿನಿಂದ ಜಿಲ್ಲೆಯಲ್ಲಿ ಈವರೆಗೆ 1,073 ಸಾವುಗಳು ಸಂಭವಿಸಿವೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ 5,972 ಸಕ್ರಿಯ ಕೋವಿಡ್-19 ಪ್ರಕರಣಗಳಿವೆ.
ಓದಿ : ಗುಟ್ರ್ ಗೂऽऽऽऽऽ : ಯಾರೂ ಊಹಿಸದ ಕ್ಲೈಮಾಕ್ಸ್ ನಿಂದಾಗಿ ಸದ್ದು ಮಾಡುತ್ತಿದೆ ಈ ಕಿರು ಚಿತ್ರ