Advertisement

20 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ: ಜಾರಕಿಹೊಳಿ

12:49 PM Jun 24, 2019 | Team Udayavani |

ಗೋಕಾಕ: ತಳಕಟ್ನಾಳ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಇಲ್ಲಿಯವರೆಗೆ ಸುಮಾರು 20 ಕೋಟಿ ರೂ.ಗಳಷ್ಟು ವಿವಿಧ ಅಭಿವೃದ್ಧಿಪರ ಕಾರ್ಯಗಳನ್ನು ಮಾಡಿರುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

Advertisement

ತಾಲೂಕಿನ ತಳಕಟ್ನಾಳ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಈಚೆಗೆ ಲೋಕಸಭಾ ಚುನಾವಣೆ ನಿಮಿತ್ತ ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದೆಯೂ ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಸುವರ್ಣ ಗ್ರಾಮೋದಯ, ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ದೇವಸ್ಥಾನಗಳ ಜೀರ್ಣೋದ್ಧಾರ, ಸಮುದಾಯ ಭವನಗಳ ನಿರ್ಮಾಣ, ಡಾ| ಬಿ.ಆರ್‌. ಅಂಬೇಡ್ಕರ್‌ ಭವನ ನಿರ್ಮಾಣ, ಲಕ್ಷ್ತ್ರೀದೇವಿ ದೇವಸ್ಥಾನದ ಬಳಿ ಯಾತ್ರಿ ನಿವಾಸ ನಿರ್ಮಾಣ, ಗಿರಿಜನ ಉಪಯೋಜನೆಯಡಿ 2.30 ಕೋಟಿ ರೂ. ವೆಚ್ಚದ ಏತ ನೀರಾವರಿ ಯೋಜನೆ, ಸರ್ಕಾರಿ ಪ್ರೌಢಶಾಲೆ ಕಟ್ಟಡಗಳ ನಿರ್ಮಾಣ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರದ ಹಲವಾರು ಯೋಜನೆಗಳನ್ನು ತಳಕಟ್ನಾಳ ಗ್ರಾಮದ ಅಭಿವೃದ್ಧಿಗೆ ನೀಡಲಾಗಿದೆ ಎಂದು ತಿಳಿಸಿದರು. ಗ್ರಾಮಸ್ಥರ ಬೇಡಿಕೆಯಂತೆ ತಳಕಟ್ನಾಳದಿಂದ ದಂಡಿನಮಾರ್ಗ ಕೂಡು ರಸ್ತೆ, ತಳಕಟ್ನಾಳದಿಂದ ಕಪರಟ್ಟಿ ಮತ್ತು ತಳಕಟ್ನಾಳದಿಂದ ತಿಗಡಿವರೆಗಿನ ಕೂಡು ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಹೇಳಿದರು. ಅಲ್ಲದೇ ತಳಕಟ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸೇರಿದಂತೆ ಸಿಬ್ಬಂದಿ ವಸತಿ ಗೃಹಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಸತ್ಕರಿಸಿದರು. ತಾಪಂ ಸದಸ್ಯ ಲಕ್ಷ್ಮಣ ಮಸಗುಪ್ಪಿ, ಮುಖಂಡರಾದ ಲಕ್ಷ್ತ್ರಣಗೌಡ ಪಾಟೀಲ, ನಿಂಗಪ್ಪ ದೊಡಮನಿ, ತಿಮ್ಮಾಜಿ ನಾಯಿಕ, ಗ್ರಾಪಂ ಅಧ್ಯಕ್ಷ ಅಪ್ಪಾಸಾಬ ನದಾಫ್‌, ದುಂಡಪ್ಪ ಹುಲಕುಂದ, ಲಕ್ಷ್ಮಣ ಹುಲ್ಲಾರ, ಪುಂಡಲೀಕ ಹುಚನಟ್ಟಿ, ವಿರುಪಾಕ್ಷಿ ಮುಂಗರವಾಡಿ, ಯಲ್ಲಪ್ಪ ಕೌಜಲಗಿ, ಪಿಕೆಪಿಎಸ್‌ ಅಧ್ಯಕ್ಷ ಗುರುಸಿದ್ದಪ್ಪ ಕಲ್ಲವ್ವಗೋಳ, ರಾಮಣ್ಣ ಬಾಣಿ, ನಾಗಪ್ಪ ಕುದರಿ, ಲಕ್ಕಪ್ಪ ಹರಿಜನ, ನಾಗಪ್ಪ ಮಾದರ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next