Advertisement

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 20 ಕೋಟಿ

09:04 PM Mar 05, 2020 | Lakshmi GovindaRaj |

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ. ಬಾದಾಮಿಯ ಸಮಗ್ರ ಅಭಿವೃದ್ಧಿಗೆ 25 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು. ಚಿತ್ರದುರ್ಗ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ತೀರ್ಮಾನಿಸಿ, 2020-21ನೇ ಸಾಲಿನಲ್ಲಿ ಸಂಸ್ಕೃತಿಕ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ ಒಟ್ಟಾರೆಯಾಗಿ 4.552 ಕೋಟಿ ರೂ. ಮೀಸಲಿಟ್ಟಿದೆ.

Advertisement

ಕರ್ನಾಟಕ ಪ್ರವಾಸೋದ್ಯಮ ಟಾಸ್ಕ್ ಫೋರ್ಸ್‌: ಪ್ರವಾಸೋ ದ್ಯಮ ಬೆಳವಣಿಗೆಗೆ ಪದ್ಮಶ್ರೀ ಪುರಸ್ಕೃತ ಸುಧಾ ಮೂರ್ತಿ ನೇತೃತ್ವದಲ್ಲಿ “ಕರ್ನಾಟಕ ಪ್ರವಾಸೋದ್ಯಮ ಟಾಸ್ಕ್ ಫೋರ್ಸ್‌’ ಸ್ಥಾಪಿಸಲಾಗಿದೆ. ಆ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು, ವಿವಿಧ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲು, ಜತೆಗೆ ಪ್ರವಾಸಿಗರನ್ನು ಆಕರ್ಷಿಸಲು 100 ಕೋಟಿ ರೂ. ನೀಡಲಿದೆ. ರಾಜ್ಯದ ಪ್ರವಾಸೋದ್ಯಮದ ಸರ್ವತೋಮುಖ ಅಭಿವೃದ್ಧಿಯನ್ನು 500 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿದೆ.

ಜೋಗದಲ್ಲಿ ಟೂರಿಸಂ ಸರ್ಕ್ನೂಟ್‌ ಅಭಿವೃದ್ಧಿ: ವಿಶ್ವಪ್ರಸಿದ್ಧ ಜೋಗ ಜಲಪಾತ ಮತ್ತು ಇತರೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪೂರಕವಾದ ಮೂಲ ಸೌಕರ್ಯ ಒದಗಿಸಿ “ಟೂರಿಸಂ ಸರ್ಕ್ನೂಟ್‌’ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next