Advertisement

ಜಿಲ್ಲೆಯ 20 ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ ಗರಿ

05:38 PM May 02, 2022 | Shwetha M |

ವಿಜಯಪುರ: 2020-21ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲ್ಯಕ್ಕೆ ಸರ್ಕಾರ ನೀಡುವ ಕಾಯಕಲ್ಪ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ 20 ಆರೋಗ್ಯ ಸಂಸ್ಥೆಗಳು ಆಯ್ಕೆಯಾಗಿವೆ.

Advertisement

ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಾಯಕಲ್ಪ ಪ್ರಶಸ್ತಿಯನ್ನು 2015ರಿಂದ ನೀಡಲಾಗುತ್ತಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಯ 15 ಆರೋಗ್ಯ ಸಂಸ್ಥೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿದ್ದರೆ, 2020-21ನೇ ಸಾಲಿನಲ್ಲಿ 20 ಆರೋಗ್ಯ ಸಂಸ್ಥೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿರುತ್ತವೆ.

ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳ ವಿಭಾಗದಲ್ಲಿ ಬಸವನಬಾಗೇವಾಡಿ ತಾಲೂಕಾಸ್ಪತ್ರೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಹೊರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ಸತತ ಎರಡನೇ ಬಾರಿಗೆ ಜಿಲ್ಲೆಯ ಅತ್ಯತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಯಕಲ್ಪ ಪ್ರಶಸ್ತಿ ಬಾಚಿದೆ.

ನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿ ಪಡೆದಿದೆ. ಬಸವನಬಾಗೇವಾಡಿ ತಾಲೂಕಾಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಚಡಚಣ, ಕಾಳಗಿ, ತಡವಲಗಾ, ನಾಲತವಾಡ, ನಿಡಗುಂದಿ ಮತ್ತು ಆಲಮೇಲ ಸಮುದಾಯ ಆರೋಗ್ಯ ಕೇಂದ್ರಗಳು ಸಮಾಧಾನಕರ ಪ್ರಶಸ್ತಿಯನ್ನು ಪಡೆದಿವೆ. ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹೊರ್ತಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಶಿವಣಗಿ, ಹೊನವಾಡ, ಮನಗೂಳಿ, ಗೊಳಸಂಗಿ, ಹೂ.ಹಿಪ್ಪರಗಿ, ಇನಚಗಲ್‌, ಕೂಡಗಿ ಮತ್ತು ರೋಣಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮಾಧಾನಕರ ಕಾಯಕಲ್ಪ ಪ್ರಶಸ್ತಿ ಪಡೆದಿವೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ದರ್ಗಾ, ಶಾಂತಿನಗರ ಮತ್ತು ತಾಜಬಾವಡಿ ಸಮಾಧಾನಕರ ಪ್ರಶಸ್ತಿಯನ್ನು ಪಡೆದಿರುತ್ತವೆ. ಪ್ರಶಸ್ತಿ ವಿಜೇತ ಎಲ್ಲ ಆರೋಗ್ಯ ಸಂಸ್ಥೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಜಕುಮಾರ ಯರಗಲ್‌, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಜೇಶ್ವರಿ ಗೋಲಗೇರಿ ಅಭಿನಂದಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next