ಆಂಧ್ರಪ್ರದೇಶ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಔಷಧ ಘಟಕವೊಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟು 15 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ.
ಅಚ್ಯುತಪುರಂನಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಈ ದುರ್ಘಟನೆ ನಡೆದಿದೆ. ಫಾರ್ಮಾಸ್ಯುಟಿಕಲ್ ಕಂಪನಿಯ ಸ್ಥಾವರದಲ್ಲಿ ರಿಯಾಕ್ಟರ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಎನ್‌ಟಿಆರ್ ಆಸ್ಪತ್ರೆ ಮತ್ತು ಇತರ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಮೃತರನ್ನು ಪುಡಿ ಮೋಹನ್ ಮತ್ತು ಎನ್ ಹರಿಕಾ ಎಂದು ಗುರುತಿಸಲಾಗಿದೆ.
ಅನಕಾಪಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಹತ್ತಾರು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಧಾವಿಸಿದ್ದು. ಇಡೀ ಪ್ರದೇಶ ದಟ್ಟ ಹೊಗೆಯಿಂದ ತುಂಬಿಕೊಂಡಿದ್ದರಿಂದ, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಂಪನಿಯು 1,000 ಕ್ಕೂ ಹೆಚ್ಚು ಕೆಲಸಗಾರರನ್ನು ಹೊಂದಿದ್ದು ಇದು ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಅತೀ ದೊಡ್ಡ ಕಂಪೆನಿಯಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Broccoli ಸೇವನೆಯಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಇವೆ….?