ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ(ನ.9) ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ಪಾಕಿಸ್ತಾನದ ಡಾನ್ ನ್ಯೂಸ್ ವರದಿ ಮಾಡಿದೆ.
ಸ್ಫೋಟದ ಸಂದರ್ಭ ಪ್ರಯಾಣಿಕರನ್ನು ಹೊತ್ತ ರೈಲು ಪೇಶಾವರಕ್ಕೆ ಹೊರಡಲು ಸಿದ್ದವಾಗಿತ್ತು ಈ ವೇಳೆಯೇ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪಾಕ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಘಟನೆ ಸಂಬಂಧ ಕ್ವೆಟ್ಟಾ ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಮೊಹಮ್ಮದ್ ಬಲೋಚ್ ಅವರು ಇದೊಂದು ಆತ್ಮಹತ್ಯಾ ದಾಳಿ ಎಂದು ಶಂಕೆ ವ್ಯಕ್ತಪಡಿಸಿದ್ದು ಇದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸ್ಫೋಟದಿಂದ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ನ ಶೀಟ್ ಗಳು ಛಿದ್ರಗೊಂಡಿದ್ದು ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಾಣಬಹುದು.