Advertisement
ಮೀನಿನ ಕ್ಷಾಮದಿಂದ ಕರಾವಳಿಯ ಮೀನುಗಾರರು ಸಂಕಷ್ಟದಲ್ಲಿದ್ದ ಸಂದರ್ಭ ಹಲವಾರು ಬಾರಿ ಕರಾವಳಿ ಕರ್ನಾಟಕದ ಮೀನುಗಾರರ ಮುಖಂಡ ಡಾ| ಜಿ. ಶಂಕರ್ ನೇತೃತ್ವದಲ್ಲಿ ಹೆಚ್ಚಿನ ಅನುದಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳನ್ನು ಆಗ್ರಹಿಸಲಾಗಿತ್ತು. ವಿಶೇಷ ಆರ್ಥಿಕ ಪ್ಯಾಕೇಜ್‌ನ ಉಪಯೋಗವು ಮೀನುಗಾರಿಕಾ ಉದ್ಯಮಗಳಿಗೆ ಮಾತ್ರವ ಲ್ಲದೆ, ಕರಾವಳಿ ಮತ್ತು ಒಳನಾಡಿನಲ್ಲಿ ಮೀನು ಗಾರಿಕೆ ನಡೆಸುತ್ತಿರುವ ಕಟ್ಟ ಕಡೆಯ ಮೀನುಗಾರನಿಗೂ ಸಿಗುವಂತಾಗಬೇಕು ಎಂದು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ತಿಳಿಸಿದ್ದಾರೆ. ಇದೇ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರಾವಳಿಯ ಸಮಸ್ತ ಮೀನುಗಾರರು ಮತ್ತು ದ.ಕ. ಮೊಗವೀರ ಮಹಾಜನ ಸಂಘದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.
ಮಲ್ಪೆ: ಕೇಂದ್ರ ಸರಕಾರವು ವಿಶೇಷ ಆರ್ಥಿಕ ಪ್ಯಾಕೇಜ್ ಮೂಲಕ ದೇಶದ ಎಲ್ಲ ಕ್ಷೇತ್ರಗಳೊಂದಿಗೆ ಮೀನುಗಾರಿಕೆಯ ಅಭಿವೃದ್ಧಿಗೂ ಆದ್ಯತೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವೆ ನಿರ್ಮಲ ಸೀತರಾಮನ್ ಅವರಿಗೆ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಕೃತಜ್ಞತೆ ಸಲ್ಲಿಸುತ್ತದೆ ಎಂದು ಫೆಡರೇಶನ್ ಅಧ್ಯಕ್ಷ ಯಶಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಮೀನು ಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶೇಷ ಮುತುವರ್ಜಿಯಿಂದ ಮೀನು
ಗಾರಿಕೆಯ ಸಮಗ್ರ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಸಲ್ಲಿಸುವುದಾಗಿ ಯಶ್‌ಪಾಲ್ ಸುವರ್ಣ ಅವರು ಇದೇ ವೇಳೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Related Articles
Advertisement