Advertisement

ಚಾಕು ಇರಿದು ನವ ವಿವಾಹಿತೆ ಹತ್ಯೆ; ವಿಷ ಕುಡಿದ ಭಗ್ನ ಪ್ರೇಮಿ

10:36 PM Sep 16, 2022 | Team Udayavani |

ದೇವನಹಳ್ಳಿ: ಕೈಕೊಟ್ಟು ಬೇರೆ ಹುಡುಗನೊಂದಿಗೆ ಹಸಮಣೆ ಏರಿದ ಪ್ರೇಯಸಿಗೆ ಭಗ್ನ ಪ್ರೇಮಿ 2 ಬಾರಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಸೌಮ್ಯ (23) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ, ಚಾಕು ಇರಿದು ವಿಷ ಕುಡಿದ ಸುಬ್ರಮಣ್ಯಗೆ ದೇವನಹಳ್ಳಿ ಆಕಾಶ್ ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಗೆಳತಿಗೆ ಇರಿದ ಪ್ರೇಮಿ
ಕೊಲೆಯಾದ ಸೌಮ್ಯ ಮತ್ತು ಆರೋಪಿ ಸುಬ್ರಮಣ್ಯ ಬೆಂಗಳೂರಿನ ನಾಗವಾರದ ಕಾಫಿ ಡೇನಲ್ಲಿ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಕೆಲ ತಿಂಗಳ ಹಿಂದೆ ಕೆಲಸ ಬಿಟ್ಪಿದ್ದ ಸೌಮ್ಯ ಪ್ರಿಯಕರ ಸುಬ್ರಮಣ್ಯನೊಂದಿಗೆ ಅಂತರ ಕಾಯ್ದುಕೊಂಡಿದ್ದಳು. 15 ದಿನಗಳ ಹಿಂದೆ ಬೇರೆ ಹುಡುಗನ ಜೊತೆ ಮದುವೆಯಾಗಿದ್ದಳು. ಪ್ರೀತಿಸಿದ ಹುಡುಗಿ ಬೇರೊಬ್ಬ ಹುಡುಗನೊಂದಿಗೆ ಮದುವೆಯಾಗಿದ್ದಕ್ಕೆ ಸುಬ್ರಮಣ್ಯ ಕೋಪಗೊಂಡಿದ್ದ.ನಿನ್ನೆ ಸೌಮ್ಯ ತವರಿಗೆ ಬಂದಿರುವ ವಿಷಯ ಸುಬ್ರಮಣ್ಯನಿಗೆ ತಿಳಿದಿತ್ತು. ಅಂತೆಯೇ ನಿನ್ನೆ ರಾತ್ರಿ ಆವತಿಯ ಸೌಮ್ಯ ಮನೆಗೆ ಬಂದು ಆಕೆಗೆ ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಇರಿದು ಪರಾರಿಯಾಗಿದ್ದ. ಸೌಮ್ಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಓಡಿ ಬಂದಿದ್ದರು. ರಕ್ತದ ಮಡುವಿನಲ್ಲಿ ಓದ್ದಾಡುತ್ತಿದ್ದ ಸೌಮ್ಯಳನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾಳೆ.

ಪ್ರಿಯತಮೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಸುಬ್ರಮಣ್ಯ ನಂತರ ಆತ ಸಹ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ದೇವನಹಳ್ಳಿಯ ಆಕಾಶ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಚಿಂತಾಜನಕವಾಗಿದೆ. ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next