Advertisement

Chamarajanagar: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಅಪರಾಧಿಗೆ 20ವರ್ಷ ಜೈಲು ಶಿಕ್ಷೆ

06:27 PM Aug 23, 2023 | Team Udayavani |

ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಅಪಹರಿಸಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ 20 ವರ್ಷಗಳ ಕಠಿಣ ಜೈಲು ಸಜೆ ವಿಧಿಸಿ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

Advertisement

ತಾಲೂಕಿನ ಗ್ರಾಮವೊಂದರ ನಾಗೇಂದ್ರ (23) ಶಿಕ್ಷೆಗೆ ಗುರಿಯಾದ ಅಪರಾಧಿ. ಈತ ತನ್ನ ಗ್ರಾಮದ 12 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಹೇಳಿ ಅಪಹರಿಸಿಕೊಂಡು ಹೋಗಿ, ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ 2021ರ ಸೆ. 13ರಂದು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅಂದಿನ ಸರ್ಕಲ್ ಇನ್‌ಸ್ಪೆಕ್ಟರ್ ಶೇಖರ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ:Chandrayaan 3 ಸೂಪರ್ ಸಕ್ಸಸ್ ; ಪ್ರಧಾನಿ ಮೋದಿ ಸಂಭ್ರಮದ ಮಾತುಗಳು

ಮಕ್ಕಳ ಸ್ನೇಹಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನಾಗೇಂದ್ರನಿಗೆ ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿಗೆ ನಾಲ್ಕು ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೀಡಲು ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ ಆದೇಶಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next