Advertisement

Chamarajanagar ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಸಜೆ

08:58 PM Aug 22, 2023 | Team Udayavani |

ಚಾಮರಾಜನಗರ: ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಗರದ ಮಕ್ಕಳ ಸ್ನೇಹಿ ಮತ್ತು ಹೆಚ್ಚುವರಿ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

Advertisement

ಹನೂರು ತಾಲೂಕು ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಬಸವಾಚಾರಿ (35) ಶಿಕ್ಷೆಗೊಳಗಾದ ಅಪರಾಧಿ.

2019ರ ಡಿ. 12ರಂದು ಘಟನೆ ನಡೆದಿತ್ತು. ಐದು ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಮನೆಗೆ ಕರೆದು ಲೈಂಗಿಕ ದೌರ್ಜನ್ಯ ನಡೆಸಿದ್ದ. ಬಾಲಕಿಯ ಪೋಷಕರು ಪ್ರಶ್ನಿಸಿದಾಗ ಆತ್ಮಹತ್ಯೆಗೆ ಯತ್ನಿಸಿದ್ದ. ಘಟನೆ ಸಂಬಂಧ ರಾಮಾಪುರ ಪೊಲೀಸರು ಪ್ರಕರಣ ದಾಖಲಿಸಿ ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆಯಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶೆ ನಿಶಾರಾಣಿ ಅವರು ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ.

ಕಾನೂನು ಸೇವಾ ಪ್ರಾಧಿಕಾರ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಯೋಗೇಶ್ ವಾದಿಸಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next