Advertisement

200 ಎಕರೆ ಭೂಕಬಳಿಕೆ: ಎಸಿಬಿ ತನಿಖೆಗೆ ; ಸಚಿವ ಆರ್‌. ಅಶೋಕ್‌

10:46 PM Feb 16, 2022 | Team Udayavani |

ವಿಧಾನ ಪರಿಷತ್ತು: ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಹೋಬಳಿ ಶಾಂತನಪುರ ಗ್ರಾಮದಲ್ಲಿ ಸುಮಾರು 600 ಕೋಟಿ ಮೌಲ್ಯದ 200 ಎಕರೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಈ ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ವಹಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

Advertisement

ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ರಘುನಾಥ್‌ ರಾವ್‌ ಮಲ್ಕಾಪೂರೆ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಾಂತನಪುರ ಗ್ರಾಮದಲ್ಲಿ 1970ರಲ್ಲಿ 50 ಮಂದಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ತಲಾ ನಾಲ್ಕು ಎಕರೆಯಂತೆ 200 ಎಕರೆ ಜಮೀನು ನೀಡಲಾಗಿತ್ತು. ಅದನ್ನು ಎರಡು ವರ್ಷಗಳಲ್ಲೇ ನೋಂದಣಿ ಮಾಡಿಕೊಂಡು ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅದರ ಮೌಲ್ಯ 500ರಿಂದ 600 ಕೋಟಿ ರೂಪಾಯಿ ಆಗಿದೆ. ಈ ಜಮೀನಿಗೆ ಅಕ್ರಮವಾಗಿ ದಾಖಲೆಗಳನ್ನು ಸೃಷ್ಟಿಸಿ ದಲಿತರನ್ನು ಬಲವಂತವಾಗಿ ಹೊರಹಾಕಿ ಭೂಕಬಳಿಕೆ ಮಾಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಸಂಬಂಧ 12 ಜನರ ವಿರುದ್ಧ 6 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.

ಶಾಂತನಪುರ ಗ್ರಾಮದ ಸರ್ವೇ ನಂಬರ್‌ 9 ಮೂಲತಃ ಸರ್ಕಾರಿ ಖರಾಬು ಜಮೀನಾಗಿದ್ದು, ಈ ಜಮೀನಿಗೆ ಅಕ್ರಮವಾಗಿ ದಾಖಲೆಗಳನ್ನು ಸೃಷ್ಟಿಸಿ ಭೂಕಬಳಿಕೆ ಮಾಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹಾಗಾಗಿ, ಪ್ರಕರಣದ ತನಿಖೆಯನ್ನು ಎಸಿಬಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಅಶೋಕ್‌ ತಿಳಿಸಿದರು.

18 ಲಕ್ಷ ರೈತರ ಖಾತೆಗೆ ನೇರ ಸಬ್ಸಿಡಿ
ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ನಷ್ಟ ಅನುಭವಿಸಿದ ಸುಮಾರು 18 ಲಕ್ಷ ರೈತರಿಗೆ 1,252.89 ಕೋಟಿ ಇನ್‌ಪುಟ್‌ ಸಬ್ಸಿಡಿ ಜತೆಗೆ ರಾಜ್ಯ ಸರಕಾರವು ಹೆಚ್ಚುವರಿಯಾಗಿ 1,135.58 ಕೋಟಿ ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ ಸದಸ್ಯ ಸಿ.ಎನ್‌. ಮಂಜೇಗೌಡ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಳೆ ಮತ್ತು ಪ್ರವಾಹದಿಂದ ಮಳೆಯಾಶ್ರಿತ, ನೀರಾವರಿ ಮತ್ತು ತೋಟಗಾರಿಕೆ ಬೆಳೆ ಸೇರಿದಂತೆ ಸುಮಾರು 12.54 ಲಕ್ಷ ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಇದರಲ್ಲಿ ಧಾರವಾಡ ಜಿಲ್ಲೆಯಲ್ಲಿ ಅತಿಹೆಚ್ಚು 1,55,633 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ಬೆಳಗಾವಿಯಲ್ಲಿ 1,50,564 ಹೆಕ್ಟೇರ್‌, ತುಮಕೂರಿನಲ್ಲಿ 1,30,118 ಹೆಕ್ಟೇರ್‌ ಬೆಳೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

Advertisement

ಮೈಸೂರು ಜಿಲ್ಲೆಯಲ್ಲಿ 7,479 ಜನ ಸಂತೃಸ್ತರಿಗೆ 534.32 ಲಕ್ಷ ಹಾಗೂ ಚಾಮರಾಜನಗರ ಜಿಲ್ಲೆಯ 4,806 ಸಂತ್ರಸ್ತರಿಗೆ 378.15 ಲಕ್ಷ ಇನ್‌ಪುಟ್‌ ಸಬ್ಸಿಡಿ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next