Advertisement

Crime: ಸ್ನೇಹಿತನ ಕೊಲೆಗೈದಿದ್ದ ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

10:20 AM Jul 16, 2024 | Team Udayavani |

ಬೆಂಗಳೂರು: ಇತ್ತೀಚೆಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದ್ದ ಕೂಲಿ ಕಾರ್ಮಿಕನ ಕೊಲೆ ಪ್ರಕರಣ ಬೇಧಿಸಿರುವ ಕೋಣನಕುಂಟೆ ಠಾಣೆ ಪೊಲೀಸರು, ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

Advertisement

ಜಿಗಣಿಯ ಹರೀಶ್‌ (34) ಬಂಧಿತ ಆರೋಪಿ. ಈತ ಜುಲೈ 7ರಂದು ತಡ ರಾತ್ರಿ ನಿರ್ಮಾಣ ಹಂತದ ಕೊತ್ತ ನೂರು ಸಮುದಾಯ ಭವನ ಕಟ್ಟಡ ದಲ್ಲಿ ಬಾಲಾಜಿ (43) ಎಂಬಾತನನ್ನು ಕೊಲೆಗೈದು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ನೇಪಾಳ ಮೂಲದ ಬಾಲಾಜಿ, ಮೂರ್ತಿ ಹಾಗೂ ಹರೀಶ್‌ ಸ್ನೇಹಿತರಾಗಿದ್ದು, ದಿನಗೂಲಿ ಮಾಡಿ ಕೊಂಡು ರಾತ್ರಿ ವೇಳೆ ಎಲ್ಲೆಂದರಲ್ಲಿ ಮಲಗು ತ್ತಿದ್ದರು. ಜುಲೈ 7ರಂದು ತಡರಾತ್ರಿ ನಿರ್ಮಾಣ ಹಂತದ ಕೊತ್ತನೂರು ಸಮುದಾಯ ಭವನ ಕಟ್ಟಡದಲ್ಲಿ ಮೂವರು ಸೇರಿ ಮದ್ಯದ ಪಾರ್ಟಿ ಮಾಡಿ¨ªಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಬಾಲಾಜಿ, ಮೂರ್ತಿ ಹಾಗೂ ಹರೀಶ್‌ ನಡುವೆ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದಿದ್ದು, ಅದು ವಿಕೋಪಕ್ಕೆ ಹೋದಾಗ ಕೋಪಗೊಂಡ ಆರೋಪಿ ಹರೀಶ್‌,ದೊಣ್ಣೆಯಿಂದ ಬಾಲಾಜಿ ಮತ್ತು ಮೂರ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ.

ನಿರ್ಮಾಣ ಹಂತದ ಕಟ್ಟಡದಲ್ಲಿ ಗಲಾಟೆ ಸದ್ದು ಕೇಳಿ ಸಾರ್ವಜನಿಕರು 112 ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಹೊಯ್ಸಳ ಸಿಬ್ಬಂದಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಾಜಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫ‌ಲಿಸದೆ ಬಾಲಾಜಿ ಮೃತಪಟ್ಟಿದ್ದ. ಘಟನೆ ಬಳಿಕ ಗಾಯಾಳು ಮೂರ್ತಿ ಸ್ಥಳದಿಂದ ಪರಾರಿಯಾಗಿದ್ದ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಕೋಣನಕುಂಟೆ ಠಾಣೆ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತ ಸೇರಿ ಸುಮಾರು 200ಕ್ಕೂ ಅಧಿಕ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿ ಹರೀಶ್‌ ಸುಳಿವು ಪತ್ತೆಯಾಗಿತ್ತು. ಈ ಸುಳಿವಿನ ಮೇರೆಗೆ ಆರೋಪಿ ಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next