Advertisement

ಉಕ್ರೇನ್‌ನಲ್ಲಿ ರಾಜ್ಯದ 200 ವಿದ್ಯಾರ್ಥಿಗಳು ಸುರಕ್ಷಿತ: ಸಿಎಂ

11:36 PM Mar 06, 2022 | Team Udayavani |

ಹುಬ್ಬಳ್ಳಿ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಕರ್ನಾಟಕದ ಇನ್ನೂ 200 ವಿದ್ಯಾರ್ಥಿಗಳು ಇದ್ದು, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‌ನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದರು. ಅವರನ್ನು ಹಂತ ಹಂತವಾಗಿ ಕರೆ ತರಲಾಗುತ್ತಿದೆ. ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ.

ಎಂಬಿಬಿಎಸ್‌ ಓದುತ್ತಿರುವ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ಚೈತ್ರಾ ಗಂಗಾಧರ ಸಂಶಿ ಕೂಡ ಸಿಎಂ ಜತೆ ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಆಗಮಿಸಿದರು. ನಿಲ್ದಾಣದಲ್ಲಿ ಚೈತ್ರಾಗೆ ಸಿಎಂ ಹೂಗುತ್ಛ ನೀಡಿ ಬರಮಾಡಿಕೊಂಡರು.

ಪ್ರಧಾನಿ ಖುದ್ದು ಕಾರ್ಯನಿರ್ವಹಣೆ
ಅನಂತರ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರೇ ಖುದ್ದು ವಿದ್ಯಾರ್ಥಿಗಳನ್ನು ಕರೆ ತರುವ ಕಾರ್ಯನಿರ್ವಹಣೆ ನೋಡಿಕೊಳ್ಳುತ್ತಿದ್ದಾರೆ. ಅವರು ಗಡಿಯ ನಾಲ್ಕೈದು ದೇಶಗಳ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಬಹಳ ದೊಡ್ಡ ಪ್ರಮಾಣದಲ್ಲಿ ಏರ್‌ ಲಿಫ್ಟ್‌ ಕಾರ್ಯ ಆಗುತ್ತಿದೆ. ಯಾರೂ ಆತಂಕ, ಭಯಗೊಳ್ಳುವ ಅವಶ್ಯಕತೆ ಇಲ್ಲ. ನವೀನ್‌ ಮೃತದೇಹ ತರುವ ಪ್ರಯತ್ನ ನಡೆಯುತ್ತಿದೆ ಎಂದರು.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next