Advertisement
ಆದರೆ, ಈ ಬೇಡಿಕೆಯನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿರಸ್ಕರಿಸಿದ್ದಾರೆ. ಆಲಪ್ಪುಳದಲ್ಲಿ ಮಾತನಾಡಿದ ಅವರು, ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಗೆ ತೆರಳಿ ಯಾರೂ ಬೇಕಾದರೂ ಮತದಾರರ ಪಟ್ಟಿ ಪರಿಶೀಲಿಸಬಹುದು ಎಂದು ತಿರುಗೇಟು ನೀಡಿದ್ದಾರೆ.
Related Articles
Advertisement
ಮತ್ತೂಂದೆಡೆ, ಮಾಜಿ ಸಚಿವ ಗುಲಾಂ ನಬಿ ಆಜಾದ್ ಕಾಂಗ್ರೆಸ್ ತೊರೆದಿರುವುದು ಪಕ್ಷಕ್ಕೆ ಇನ್ನಷ್ಟು ಸವಾಲುಗಳನ್ನು ಒಡ್ಡಿದೆ. ಜಮ್ಮು ಮತ್ತು ಕಾಶ್ಮೀರ, ಹರ್ಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿನ 5 ಸಾವಿರ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆಯುವ ಮಾತಾಡುತ್ತಿದ್ದಾರೆ.
ಹರ್ಯಾಣದಲ್ಲಿ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರು ಆಜಾದ್ ಅವರನ್ನು ಭೇಟಿಯಾಗಿರುವುದು ಪಕ್ಷದ ನಾಯಕಿ ಕುಮಾರಿ ಸೈಲ್ಜಾ ಅವರನ್ನು ಸಿಟ್ಟಿಗೆಬ್ಬಿಸಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ವರಿಷ್ಠರಿಗೆ ಪತ್ರ ಬರೆದಿದ್ದಾರೆ. ಜತೆಗೆ ವರಿಷ್ಠರಿಗೆ ಈ ಬಗ್ಗೆ ಮಾಹಿತಿ ನೀಡಿದ್ದನ್ನು ಸೈಲ್ಜಾ ಖಚಿತಪಡಿಸಿದ್ದಾರೆ. ಆದರೆ, ಆಜಾದ್ ಅವರನ್ನು ಭೇಟಿ ಮಾಡಿರುವುದನ್ನು ಹೂಡ ಸಮರ್ಥಿಸಿಕೊಂಡಿದ್ದಾರೆ.
ಸೋಮವಾರ ನಡೆದಿದ್ದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರಾದ ಆನಂದ ಶರ್ಮಾ, ಪೃಥ್ವಿರಾಜ್ ಚೌಹಾಣ್ ಕೂಡ ಗುಲಾಂ ನಬಿ ಆಜಾದ್ ಜತೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಸ್ಲೀಪಿಂಗ್ ಕಂಟೈನರ್‌ನಲ್ಲಿ ರಾಹುಲ್ ವಿಶ್ರಾಂತಿ:
ಸೆ.7ರಿಂದ ಶುರುವಾಗುವ ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ಸ್ಲಿàಪಿಂಗ್ ಕಂಟೈನರ್ ಬಾಕ್ಸ್‌ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಪ್ರತಿ ದಿನ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ವರೆಗೆ ಯಾತ್ರೆ ನಡೆಯಲಿದೆ. ನಂತರ ರಾಹುಲ್ ಗಾಂಧಿ ಸಾರ್ವಜನಿಕರ ಜತೆಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪಕ್ಷದ ನಾಯಕ ಡಾ.ಶಮಾ ಮೊಹಮ್ಮದ್ ತಿಳಿಸಿದ್ದಾರೆ.