ನವದೆಹಲಿ: 2008ರಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ 38 ಮಂದಿ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಹಾಗೂ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ (ಫೆ.18) ತೀರ್ಪನ್ನು ಪ್ರಕಟಿಸಿದೆ.
ಇದನ್ನೂ ಓದಿ:ಅಣ್ಣ-ತಂಗಿ ಅನೈತಿಕ ಸಂಬಂಧ; ಅಡ್ಡಿಯಾದ ತಾಯಿಯನ್ನೇ ಸಂಪ್ ಗೆ ತಳ್ಳಿ ಕೊಲೆ!
2008ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದಲ್ಲಿ 56 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಪ್ರಕರಣದ ಬಗ್ಗೆ ವಾದ, ಪ್ರತಿವಾದ ಆಲಿಸಿದ್ದ ಅಹಮದಾಬಾದ್ ನ ವಿಶೇಷ ಕೋರ್ಟ್ ಫೆ.8ರಂದು 49 ಮಂದಿಯನ್ನು ದೋಷಿ ಎಂದು ತೀರ್ಪು ನೀಡಿತ್ತು.
2008ರ ಜುಲೈ 26ರಂದು ಅಹಮದಾಬಾದ್ ನ ವಿವಿಧೆಡೆ ಕೇವಲ 70 ನಿಮಿಷಗಳ ಅವಧಿಯಲ್ಲಿ 22 ಬಾಂಬ್ ಗಳನ್ನು ಸ್ಫೋಟಗೊಳಿಸಲಾಗಿತ್ತು. ಇತ್ತೀಚೆಗಿನ ವರ್ಷಗಳಲ್ಲಿ ನಡೆದ ಅತೀ ದೀರ್ಘಾವಧಿ ವಿಚಾರಣೆಯ ಕ್ರಿಮಿನಲ್ ಪ್ರಕರಣಗಳಲ್ಲಿ ಇದು ಒಂದಾಗಿದೆ ಎಂದು ವರದಿ ವಿವರಿಸಿದೆ.
ಸುಮಾರು 13 ವರ್ಷಗಳ ಕಾಲ ವಿಚಾರಣೆ ನಡೆಸಿದ್ದ ವಿಶೇಷ ಕೋರ್ಟ್ ಫೆ.8ರಂದು 49 ಆರೋಪಿಗಳನ್ನು ದೋಷಿ ಎಂದು ತೀರ್ಪು ನೀಡಿ, 28 ಮಂದಿಯನ್ನು ಖುಲಾಸೆಗೊಳಿಸಿತ್ತು. ಹರ್ಕತ್ ಅಲ್ ಇಸ್ಲಾಮಿ ಉಗ್ರಗಾಮಿ ಸಂಘಟನೆಯ ಈ ಸರಣಿ ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು.