Advertisement
ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಫ್ ಜಮೀಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ಹೈಕೋರ್ಟ್ ರದ್ದುಪಡಿಸಿತ್ತು. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ.
Related Articles
Advertisement
ಅಲ್ಲದೆ, ಕಾಯ್ದೆಯ ನಿಯಮಗಳು ಅಸಾಂವಿಧಾನಿಕ ಮತ್ತು ಅಕ್ರಮವಾಗಿದೆ ಎಂಬುದನ್ನು ಮನವರಿಕೆ ಮಾಡಿಕೊಡುವಲ್ಲಿ ಅರ್ಜಿದಾರರ ಪರ ವಕೀಲರು ಸೋತಿದ್ದಾರೆ. ಇನ್ನು ಕಾಯ್ದೆಯಿಂದ ಬಾಧಿತರಾದ ಅಭ್ಯರ್ಥಿಗಳು ಈಗಾಗಲೇ ಕರ್ನಾಟಕ ಆಡಳಿತ ನ್ಯಾಯಮಂಡಳಿ ಮೆಟ್ಟಿಲೇರಿದ್ದಾರೆ. ಈ ಹಂತದಲ್ಲಿ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ.ಅಷ್ಟಕ್ಕೂ ಕಾಯ್ದೆಯ ಯಾವ ಅಂಶ ಕಾನೂನು ಬಾಹಿರ ಎಂದು ಅರ್ಜಿದಾರರು ಹೇಳಿಲ್ಲ. ಇಡೀ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ನೇಮಕಾತಿ ಆದೇಶ ನೀಡಲು ಕೆಎಟಿ ಸೂಚನೆಬೆಂಗಳೂರು: ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆ-2022 ಅನುಸಾರ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಯ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬಹುದು. ಆದರೆ, ಅದು ನ್ಯಾಯಮಂಡಳಿಯ ಅಂತಿಮ ನಿರ್ಧಾರಕ್ಕೆ ಒಳಪಡಲಿದೆ ಎಂದು ಕರ್ನಾಟಕ ಆಡಳಿತ ನ್ಯಾಯಮಂಡಳಿ ಹೇಳಿದೆ. ಕಾಯ್ದೆಗೆ ತಡೆ ನೀಡಬೇಕು ಮತ್ತು ನೇಮಕಾತಿ ಆದೇಶ ನೀಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಂಗ ಸದಸ್ಯ ನಾರಾಯಣ ಹಾಗೂ ಆಡಳಿತಾತ್ಮಕ ಸದಸ್ಯ ಎನ್. ಶಿವಶೈಲಂ ಅವರಿದ್ದ ಪೀಠ ಗುರುವಾರ ಈ ಆದೇಶ ನೀಡಿತು.