Advertisement

2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಬಿ.ಸಿ.ನಾಗೇಶ್

03:20 PM Sep 20, 2022 | Team Udayavani |

ವಿಧಾನಸಭೆ: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದ್ದಾರೆ.

Advertisement

ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಪತ್ರಿಕೆಯಲ್ಲಿ ವರದಿ ಬಂದ ನಂತರ ನಾವು ಪ್ರಾಥಮಿಕ ತನಿಖೆ ನಡೆಸಿದಾಗ ಬೆಂಗಳೂರು ವಿಭಾಗದಲ್ಲಿ 16 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ.  ಮತ್ತಷ್ಟು ವಿಚಾರಣೆ ನಡೆಸಿದಾಗ 35 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ. ರಾಜ್ಯಾದ್ಯಂತ ಈ ರೀತಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸಮಗ್ರ ತನಿಖೆ ನಡೆಸುತ್ತೇವೆ. ಇದು ಸಮಾಜವೇ ತಲೆತಗ್ಗಿಸುವ ಪ್ರಕರಣ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ಸರ್ಕಾರದ ವಿರುದ್ಧ ಸಾಮಾಜಿಕ ತಾಣದಲ್ಲಿ ಪೋಸ್ಟ್‌ ಮಾಡಿದ ಅಧಿಕಾರಿ ಎತ್ತಂಗಡಿ

ಆದರ ಇಷ್ಟಕ್ಕೆ ಸುಮ್ಮನಾಗದ ಬಿಜೆಪಿ ಶಾಸಕರು, ಈ ಹಗರಣ ಯಾರ ಕಾಲದಲ್ಲಿ ನಡೆದಿದೆ? ಯಾರೆಲ್ಲ ಭಾಗಿಯಾಗಿದ್ದಾರೆಂಬುದು ಗೊತ್ತಾಗಬೇಕು ಎಂದು ಆಗ್ರಹಿಸಿದರು.

ಇಂದು ಕಾಂಗ್ರೆಸ್ ಸದಸ್ಯರು ಪಿಎಸ್ ಐ ನೇಮಕ ಹಗರಣ ಪ್ರಸ್ತಾಪ ಮಾಡುವ ಹಿನ್ನೆಲೆಯಲ್ಲಿ ಇದಕ್ಕೆ ಮಹತ್ವ ಲಭಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next