Advertisement

4 ರಾಜ್ಯಗಳ ವಿಧಾನಸಭಾ ಟ್ರೆಂಡ್; ಆಂಧ್ರದಲ್ಲಿ YSRCP, ಒಡಿಶಾದಲ್ಲಿ BJD ಮೇಲುಗೈ

04:43 PM May 24, 2019 | Nagendra Trasi |

ನವದೆಹಲಿ:ಹೈವೋಲ್ಟೇಜ್ ಲೋಕಸಭಾ ಚುನಾವಣೆಯ ಮತಎಣಿಕೆ ಬಿರುಸಿನಿಂದ ನಡೆಯುತ್ತಿದ್ದರೆ, ಮತ್ತೊಂದೆಡೆ ಲೋಕಸಭಾ ಚುನಾವಣೆ ಜೊತೆಗೆ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ನಡೆದಿದ್ದು, ಮತ ಎಣಿಕೆ ನಡೆಯುತ್ತಿದೆ.

Advertisement

ಗುರುವಾರ ಬೆಳಗ್ಗೆ 8ಗಂಟೆಯಿಂದ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಹಾಗೂ ಸಿಕ್ಕಿಂ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಆಂಧ್ರಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಸಿಪಿ ಭರ್ಜರಿ 141 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೀವ್ರ ಮುಖಭಂಗಕ್ಕೊಳಗಾಗಿದೆ.

ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 16 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಒಡಿಶಾದಲ್ಲಿ ಬಿಜೆಡಿ 108 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಭಾರತೀಯ ಜನತಾ ಪಕ್ಷ 25 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಕೇವಲ 14 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸಿಕ್ಕಿಂನಲ್ಲಿ ಎಸ್ ಡಿಎಫ್ 02 ಸ್ಥಾನ, ಎಸ್ ಕೆಎಂ 07 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next