Advertisement

2020-21: ಪಿಯು ಪ್ರವೇಶ ಪ್ರಕ್ರಿಯೆ ಆರಂಭ

12:37 AM Aug 13, 2020 | mahesh |

ಬೆಂಗಳೂರು: ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಸಂಬಂಧಿಸಿದ ಪ್ರವೇಶಾತಿ ಪ್ರಕ್ರಿಯೆಯ ಮಾರ್ಗಸೂಚಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಆಗಸ್ಟ್‌ 13ರಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ.

Advertisement

ಅರ್ಜಿ ವಿತರಣೆ ಆಗಸ್ಟ್‌ 13ರಿಂದ ಆರಂಭಿಸಿ, 4 ಕಾರ್ಯನಿರತ ದಿನ(ವರ್ಕಿಂಗ್‌ ಡೇ) ಮಾತ್ರ ವಿತರಿಸ ಬೇಕು. ತರಗತಿಗಳ ಆರಂಭದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ. ದ್ವಿತೀಯ ಪಿಯು ಪೂರಕ ಪರೀಕ್ಷೆಯನ್ನು ಸೆಪ್ಟಂಬರ್‌ 7ರಿಂದ 18ರ ಅವಧಿಯಲ್ಲಿ ನಡೆಯಲಿದೆ.

ದಿನಾಂಕ ವಿಸ್ತರಣೆ
2019- 20ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯವåಾಪನಕ್ಕೆ ಹಾಗೂ ಮರು ಏಣಿಕೆಗೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ್ದ ಕೊನೆಯ ದಿನಾಂಕವನ್ನು ಆಗಸ್ಟ್‌ 14ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಹೊಸ ಪಿಯು ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಹೊಸದಾಗಿ ಪಿಯು ಕಾಲೇಜು ಆರಂಭಕ್ಕೆ ಆಸಕ್ತ ಟ್ರಸ್ಟ್‌ಗಳಿಂದ ಪಿಯು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಅರ್ಜಿಗಳು ಇಲಾಖೆ ವೆಬ್‌ಸೈಟ್‌ನಲ್ಲಿದ್ದು, ಸಲ್ಲಿಸಲು ಆ.21 ಕೊನೆಯ ದಿನವಾಗಿದೆ. ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. 2020- 21ನೇ ಸಾಲಿನಲ್ಲಿ ಕಾಲೇಜು ಆರಂಭಿಸಲು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಮತ್ತೂಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next