Advertisement

Panchayati raj ಇಲಾಖೆಯಲ್ಲಿ 2022 ಹುದ್ದೆ ಭರ್ತಿ: ಸಚಿವ ಪ್ರಿಯಾಂಕ್‌ ಖರ್ಗೆ

12:33 AM Mar 02, 2024 | Team Udayavani |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ವಿವಿಧ ಹಂತಗಳಲ್ಲಿದ್ದು, ಶೀಘ್ರದಲ್ಲೇ ಹುದ್ದೆಗಳ ನೇಮಕಾತಿ ಪತ್ರಗಳನ್ನು ಅಭ್ಯರ್ಥಿಗಳು ಪಡೆಯಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Advertisement

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಎಂಜಿನಿಯರ್‌, 288 ಸಹಾಯಕ ಎಂಜಿನಿಯರ್‌ ಮತ್ತು 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗವು ಕಳೆದ ಜ.31ರಂದು ಅಂತಿಮಪಟ್ಟಿಯ ಅಧಿಸೂಚನೆ ಹೊರಡಿಸಿದೆ.

ಈ ಪೈಕಿ 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ನೇಮಕಾತಿ ಆದೇಶವನ್ನು ಕರ್ನಾಟಕ ಲೋಕಸೇವಾ ಆಯೋಗವು ತಡೆ ಹಿಡಿದಿದ್ದು, ಉಳಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಾದ ವಿವಿಧ 91 ಹುದ್ದೆಗಳನ್ನು ನೇರ ನೇಮಕಾತಿ ಕೋಟಾದಡಿ ಆನ್‌ಲೈನ್‌ ಮೂಲಕ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ತಿಳಿಸಲಾಗಿದೆ.

ಈ ಹುದ್ದೆಗಳಲ್ಲಿ 20 ಕಿರಿಯ ಎಂಜಿನಿಯರ್‌, 18 ಪ್ರಥಮ ದರ್ಜೆ ಸಹಾಯಕರು. 3 ಪ್ರಥಮ ದರ್ಜೆ ಲೆಕ್ಕ ಸಹಾಯಕರು, 42 ದ್ವಿತೀಯ ದರ್ಜೆ ಸಹಾಯಕರು ಹಾಗೂ 8 ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಸೇರಿದ್ದು, ಈ ಸಂಬಂಧದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.

Advertisement

ಪಂಚಾಯತ್‌ರಾಜ್‌ ಎಂಜಿನಿಯ ರಿಂಗ್‌ ಇಲಾಖೆಯಲ್ಲಿ ಐವರು ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ನೇರ ನೇಮಕಾತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳೆದ 24ರಂದು ಸೂಚಿಸಲಾಗಿದೆ ಎಂದರು.

256 ಪಿಡಿಒ, 220 ಕಾರ್ಯದರ್ಶಿ ಸೇರಿ ವಿವಿಧ ಹುದ್ದೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಅಗತ್ಯವಾದ 40 (ಇವುಗಳಲ್ಲಿ 8 ಹು¨ªೆಗಳು ಕಲ್ಯಾಣ ಕರ್ನಾಟಕ) ಗ್ರೂಪ್‌ ಎ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಾದ ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ಕಾರ್ಯದರ್ಶಿಗಳನ್ನು ಭರ್ತಿ ಮಾಡಲು ಲೋಕಸೇವಾ ಆಯೋಗವು ಫೆ. 26ರಂದು ಅಧಿಸೂಚನೆ ಹೊರಡಿಸಿದೆ.

ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ 256 ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (106 ಹೈ.ಕ), 220 ಗ್ರಾಮ ಪಂಚಾಯತ್‌ ಕಾರ್ಯದರ್ಶಿ (ಗ್ರೇಡ್‌-1) (85 ಹೈ.ಕ), 343 ಗ್ರಾಮ ಪಂಚಾ¿ಯತ್‌ ಕಾರ್ಯದರ್ಶಿ (ಗ್ರೇಡ್‌-2) (52 ಹೈ.ಕ) ಮತ್ತು 105 ದ್ವಿತೀಯ ದರ್ಜೆ ಲೆಕ್ಕ ಸಹಾಯಕ (50 ಹೈ.ಕ) ಹುದ್ದೆಗಳನ್ನು ನೇರವಾಗಿ ತುಂಬಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಶೀಘ್ರದಲ್ಲೇ ಸೂಚಿಸಲಾಗುವುದು ಎಂದು ಪ್ರಿಯಾಂಕ್‌ ಹೇಳಿದರು.

ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಗಳಲ್ಲಿ ಖಾಲಿ ಇರುವ 100 ಪ್ರಥಮ ದರ್ಜೆ ಸಹಾಯಕರು, 200 ದ್ವಿತೀಯ ದರ್ಜೆ ಸಹಾಯಕರು ಮತ್ತು ಕಲ್ಯಾಣ ಕರ್ನಾಟಕ ವೃಂದದ 48 ಪ್ರಥಮ ದರ್ಜೆ ಸಹಾಯಕರು ಹಾಗೂ 109 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತುಂಬಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next