ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ಸಿ ವೋಟರ್ ಇತ್ತೀಚೆಗೆ ದೇಶದ ಜನರ ಮನೋಭಾವ ತಿಳಿದುಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಭಾರತದಲ್ಲಿ ಅತ್ಯಂತ ಜನಪ್ರಿಯ ರಾಜಕೀಯ ನಾಯಕ ಯಾರು ಎಂಬ ಸಮೀಕ್ಷೆಯನ್ನು ನಡೆಸಿದೆ.
ಇದನ್ನೂ ಓದಿ:ಏರ್ ಇಂಡಿಯಾ-ಬೋಯಿಂಗ್ ಡೀಲ್ ;ಅಮೆರಿಕದಲ್ಲಿ 1 ಮಿಲಿಯನ್ ಉದ್ಯೋಗ ಸೃಷ್ಟಿ
ಸಮೀಕ್ಷೆಯಲ್ಲಿ, ಜವಾಹರಲಾಲ್ ನೆಹರು, ಇಂದಿರಾಗಾಂಧಿ, ಅಟಲ್ ಬಿಹಾರ ವಾಜಪೇಯಿ, ಮನಮೋಹನ್ ಸಿಂಗ್ ಮತ್ತು ಜವಾಹರಲಾಲ್ ನೆಹರು ಸೇರಿದಂತೆ ಸ್ವತಂತ್ರ ಭಾರತದ ಅತ್ಯುತ್ತಮ ಪ್ರಧಾನಿ ಯಾರು ಎಂಬುದನ್ನು ಆಯ್ಕೆ ಮಾಡುವಂತೆ ಜನರಲ್ಲಿ ಪ್ರಶ್ನಿಸಲಾಗಿತ್ತು. ಸಿ ವೋಟರ್ ಸಮೀಕ್ಷೆಯಲ್ಲಿ ನರೇಂದ್ರ ಮೋದಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಇಂದಿರಾ ಗಾಂಧಿ ಸೇರಿದಂತೆ ಮೂರು ಹೆಸರುಗಳಿಗೆ ಗರಿಷ್ಠ ಪ್ರತಿಕ್ರಿಯೆ ಬಂದಿರುವುದಾಗಿ ತಿಳಿಸಿದೆ.
“ಸ್ವತಂತ್ರ ಭಾರತದಲ್ಲಿ ನರೇಂದ್ರ ಮೋದಿ ಅತ್ಯುತ್ತಮ ಪ್ರಧಾನಿ ಎಂದು ಶೇ.47ರಷ್ಟು ಮಂದಿ ಆಯ್ಕೆ ಮಾಡಿರುವುದಾಗಿ ಸಿ ವೋಟರ್ ಸಮೀಕ್ಷೆ ತಿಳಿಸಿದೆ. ಬಿಜೆಪಿಯ ಸ್ಟಾರ್ ಪ್ರಚಾರಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅತ್ಯುತ್ತಮ ಪ್ರಧಾನಿ ಎಂದು ಶೇ.16ರಷ್ಟು ಮಂದಿ ಆಯ್ಕೆ ಮಾಡಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಶೇ.12ರಷ್ಟು ಜನರು ಆಯ್ಕೆ ಮಾಡಿರುವುದಾಗಿ ಸಮೀಕ್ಷೆ ವಿವರಿಸಿದೆ”.
ಜವಾಹರಲಾಲ್ ನೆಹರೂವನ್ನು ಶೇ.9ರಷ್ಟು ಜನರು ಆಯ್ಕೆ ಮಾಡುವ ಮೂಲಕ ನಾಲ್ಕನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರನ್ನು ಶೇ.8ರಷ್ಟು ಮಂದಿ ಮಾತ್ರ ಆಯ್ಕೆ ಮಾಡಿರುವುದಾಗಿ ಸಿ ವೋಟರ್ ಸಮೀಕ್ಷೆ ತಿಳಿಸಿದೆ.
ಪ್ರಧಾನಿ ಮೋದಿ ಜನಪ್ರಿಯತೆ ಕೊಂಚ ಇಳಿಕೆ:
ಸಿ ವೋಟರ್ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯಲ್ಲಿ ಇಳಿಕೆ ಕಂಡಿದೆ, ಆದರೂ ಪ್ರಧಾನಿ ಅಭ್ಯರ್ಥಿಯನ್ನಾಗಿ ಶೇ.52ರಷ್ಟು ಜನರು ಆಯ್ಕೆ ಮಾಡುವ ಮೂಲಕ ಪ್ರಮುಖ ಆದ್ಯತೆ ನೀಡಿದ್ದು, ಕಳೆದ ವರ್ಷದ ಸಮೀಕ್ಷೆಯಲ್ಲಿ ಮೋದಿ ಅವರನ್ನು ಶೇ.53ರಷ್ಟು ಜನರು ಒಲವು ವ್ಯಕ್ತಪಡಿಸಿದ್ದರು.
ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚಳ:
ಭಾರತ್ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜನಪ್ರಿಯೆ ಹೆಚ್ಚಳವಾಗಿದ್ದು, ಶೇ.14ರಷ್ಟು ಜನರು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಕಳೆದ ವರ್ಷ ಕೇವಲ ಶೇ.9ರಷ್ಟು ಮಂದಿ ಮಾತ್ರ ಪ್ರಧಾನಿ ಅಭ್ಯರ್ಥಿ ಬಗ್ಗೆ ಒಲವು ವ್ಯಕ್ತಪಡಿಸಿದ್ದರು.