ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರವನ್ನು ಮೈಸೂರು ದಸರಾ ಮಾದರಿಯಲ್ಲಿ ವಿಜೃಂಭಿಸುವಂತೆ ಮಾಡಲಾಗು ತ್ತದೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಐತಿ ಹಾಸಿಕ ಸ್ಥಳವಾಗಿರುವ ವೀರಸೌಧದಿಂದ 2028ರ ಚುನಾವಣಾ ರಣಕಹಳೆ ಮೊಳಗಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದರು.
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಂಕಾ ಗಾಂಧಿ ಆಗಮಿಸಲಿದ್ದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಅಲ್ಲದೇ ದೇಶದ ವಿವಿಧ ಭಾಗಗಳಿಂದ 150 ಜನ ಸಂಸದರು, 40 ಜನ ಬಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು ಆಗಮಿಸಲಿ
ದ್ದಾರೆ ಎಂದರು.