Advertisement
ವಿಕಾಸಸೌಧದಲ್ಲಿ ಸೋಮವಾರ ನಡೆದ ಕಬ್ಬು ನಿಯಂತ್ರಣ ಮಂಡಳಿ ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಇಲ್ಲಿವರೆಗೆ ಸಕ್ಕರೆಯ ಉಪ ಉತ್ಪನ್ನಗಳ ಮೇಲೆ ಲಾಭಾಂಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಕಬ್ಬಿನ ಉಪ ಉತ್ಪನ್ನದ ಮೇಲೆ ರೈತರಿಗೆ ಲಾಭಾಂಶ ನೀಡಲು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
Related Articles
Advertisement
ರೈತರ ತಿರಸ್ಕಾರಕಬ್ಬು ಖರೀದಿ ಮಂಡಳಿ ಸಭೆಯಲ್ಲಿ ಸಕ್ಕರೆ ಸಚಿವರು ಕಬ್ಬಿನ ಉಪ ಉತ್ಪನ್ನಗಳಿಂದ ಟನ್ ಕಬ್ಬಿಗೆ 126 ರೂ. ಲಾಭ ಬರುತ್ತದೆ. ಅದರಲ್ಲಿ ಮೊದಲನೇ ಕಂತಾಗಿ ರೈತರಿಗೆ ಎಫ್ಆರ್‌ಪಿಗೆ ಹೆಚ್ಚುವರಿಯಾಗಿ 50 ರೂ. ನೀಡುವಂತೆ ಕಾರ್ಖಾನೆಗಳಿಗೆ ಆದೇಶ ಹೊರಡಿಸುವುದಾಗಿ ಸಕ್ಕರೆ ಸಚಿವ ಮುನೇನಕೊಪ್ಪ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ತಿಳಿಸಿದರು. ಆದರೆ, ಸರ್ಕಾರದ ಈ ನಿಲುವು ತಿರಸ್ಕರಿಸಲಾಗಿದ್ದು, ಹೋರಾಟ ಮುಂದುವರಿಯಲಿದೆ ಎಂದು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ತಿಳಿಸಿದ್ದಾರೆ. ಆದರೆ, ಈ ವಿಚಾರವಾಗಿ ಮಂಗಳವಾರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳೋಣ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಶಾಂತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರ ರೈತರ ಪರ ಇದೆ:
ಸರ್ಕಾರದ ತೀರ್ಮಾನವನ್ನು ತಿರಸ್ಕರಿಸಿ ರೈತರು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರ ಹೋರಾಟ ಇರಬೇಕು. ಆಗ ಮಾತ್ರ ಅನೇಕ ವಿಚಾರಗಳು ಸರ್ಕಾರದ ಗಮನಕ್ಕೆ ಬರುತ್ತವೆ. ರೈತರಿಗಾಗಿ, ರೈತರ ಪರ ಇರುವ ಸರ್ಕಾರ ನಮ್ಮದು. ಇಲ್ಲಿವರೆಗೆ ಸಕ್ಕರೆ ಉಪ ಉತ್ಪನ್ನ ಮೇಲಿನ ಲಾಭಾಂಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ನಮ್ಮ ಸರ್ಕಾರ ಕಬ್ಬಿನ ಉಪ ಉತ್ಪನ್ನ ಮೇಲೆ ಲಾಭಾಂಶ ನೀಡಲು ನಿರ್ಧರಿಸಿದೆ. ಮೊದಲ ಹಂತದಲ್ಲಿ 204 ಕೋಟಿ ರೂ. ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ ಈ ವರ್ಷದ ಕಬ್ಬು ನುರಿಸುವಿಕೆ ಮುಗಿದ ಮೇಲೆ ಲಾಭ ಆಧರಿಸಿ ರೈತರಿಗೆ ಲಾಭಾಂಶ ನೀಡಲಾಗುವುದು ಎಂದು ಸಚಿವರು ತಿಳಿಸಿದರು.