ಬಾಗಲಕೋಟೆ: ಜಿಲ್ಲೆಯಲ್ಲಿ ಶುಕ್ರವಾರ 112 ಜನ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದು, ಹೊಸದಾಗಿ 206 ಜನರಿಗೆ ಈ ಸೋಂಕು ದೃಡಪಟ್ಟಿವೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 8987 ಕೋವಿಡ್ 19 ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 7731 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.
ಹೊಸದಾಗಿ ಸೋಂಕು ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನ 61, ಬಾದಾಮಿ 34, ಹುನಗುಂದ 41, ಬೀಳಗಿ 17, ಮುಧೋಳ 25, ಜಮಖಂಡಿ 28 ಜನರು ಸೇರಿದ್ದಾರೆ. ಅವರೆಲ್ಲರನ್ನೂ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 2913 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 86590 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 74183 ನೆಗಟಿವ್ ಪ್ರಕರಣ, 8781 ಪಾಸಿಟಿವ್ ಪ್ರಕರಣ ಹಾಗೂ 96 ಸೋಂಕಿತರು ಮೃತಪಟ್ಟಿದ್ದಾರೆ.
ಇನ್ನು 1160 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 665 ಇವೆ.
ಈ ಎಲ್ಲಾ ಮಾಹಿತಿಯನ್ನು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ಅವರು ಮಾಧ್ಯಮಗಳಿಗೆ ಇಂದು ನೀಡಿದ್ದಾರೆ.