Advertisement

BBMP: ಬಿಬಿಎಂಪಿಯಲ್ಲಿ 2067 ಕೋಟಿ ರೂ. ಅಕ್ರಮ: ಎನ್‌.ಆರ್‌.ರಮೇಶ್‌

01:06 PM Oct 24, 2024 | Team Udayavani |

ಬೆಂಗಳೂರು: ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ್ದ 2,067 ಕೋಟಿ ರೂ. ಅನುದಾನ ದುರ್ಬಳಕೆ ಆರೋಪದಲ್ಲಿ 9 ಮಂದಿ ಐಎಎಸ್‌ ಅಧಿಕಾರಿಗಳ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ(ಇಡಿ) ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌. ರಮೇಶ್‌ ದೂರು ಸಲ್ಲಿಸಿದ್ದಾರೆ.

Advertisement

ಈ ಸಂಬಂಧ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬುಧವಾರ ದಾಖಲೆ ಬಿಡುಗಡೆಗೊಳಿಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, 2013-14 ರಿಂದ ರಿಂದ 2023-24 ರ ಅವಧಿಯಲ್ಲಿ ಕೇಂದ್ರ ಸರ್ಕಾರದ 13, 14 ಮತ್ತು 15ನೇ ಹಣಕಾಸು ಆಯೋಗದ ಅನುದಾನವನ್ನು ವೈಜ್ಞಾನಿಕ ಸಂಸ್ಕರಣಾ ಘಟಕಗಳ ನಿರ್ಮಾಣ, ಮೆಕಾನಿಕಲ್‌ ಸ್ವೀಪಿಂಗ್‌ ಮಿಷನ್‌, ಸುಧಾರಿತ ಉಪಕರಣಗಳ ಖರೀದಿ, ಭೂಭರ್ತಿ ಕೇಂದ್ರಗಳ ಅಭಿವೃದ್ಧಿ ಹೆಸರಿನಲ್ಲಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next