Advertisement

ಗಣಿತ ಪರೀಕ್ಷೆಗೆ 20979 ವಿದ್ಯಾರ್ಥಿಗಳು ಹಾಜರು

01:50 PM Jun 28, 2020 | Suhan S |

ಹಾವೇರಿ: ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 21,140 ವಿದ್ಯಾರ್ಥಿಗಳಲ್ಲಿ 20,979 ವಿದ್ಯಾರ್ಥಿಗಳು ಹಾಜರಾಗಿದ್ದು 161 ವಿದ್ಯಾರ್ಥಿಗಳು ಗೈರಾಗಿದ್ದರು. 691 ವಲಸೆ ವಿದ್ಯಾರ್ಥಿಗಳಲ್ಲಿ ನಾಲ್ವರು ಗೈರಾಗಿದ್ದರು.

Advertisement

ಕೋವಿಡ್ ಪ್ರಮಾಣಿಕೃತ ಮಾರ್ಗಸೂಚಿಯಂತೆ ಜಿಲ್ಲೆಯ ಎಲ್ಲ 75 ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌ ನೀಡಲಾಯಿತು. ಮಾಸ್ಕ್ ಇಲ್ಲದ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಲಾಯಿತು. ಕೋವಿಡ್ ಸೋಂಕಿತ ವ್ಯಕ್ತಿಗಳ ಮನೆಯಿರುವ ಪ್ರದೇಶವನ್ನು ಕಂಟೈನ್ಮೆಂಟ್‌ ಝೋನ್‌ ಎಂದು ಗುರುತಿಸಲಾಗಿದ್ದು, ಅಲ್ಲಿಯ 68 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಜ್ವರ, ನೆಗಡಿ ಇತ್ಯಾದಿ ಅನಾರೋಗ್ಯದಿಂದ ಬಳಲುತ್ತಿದ್ದ ನಾಲ್ವರು ವಿದ್ಯಾರ್ಥಿಗಳಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು ಎಂದು ಡಿಡಿಪಿಐ ಅಂದಾನಪ್ಪ ವಡಗೇರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next