Advertisement

ಚಿತ್ರದುರ್ಗ ಜಿಲ್ಲೆಯಲ್ಲಿ 21 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

10:22 PM May 21, 2021 | Team Udayavani |

ಚಿತ್ರದುರ್ಗ: ಜಿಲ್ಲೆಯಲ್ಲಿ ಕಪ್ಪು ಶಿಲೀಂದ್ರ ಪ್ರಕರಣ (ಬ್ಲ್ಯಾಕ್ ಫಂಗಸ್) ದಾಂಗುಡಿ ಇಟ್ಟಿದ್ದು, ಈವರೆಗೆ ಒಟ್ಟು 21 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರ ಚಿಕಿತ್ಸೆಗಾಗಿ ಡಾ.ಪ್ರಹ್ಲಾದ್‌ ನೇತೃತ್ವದಲ್ಲಿ ತಂಡವೊಂದನ್ನು ರಚಿಸಲಾಗಿದೆ.

Advertisement

ಕಪ್ಪು ಶಿಲೀಂದ್ರ ಕಾಣಿಸಿಕೊಂಡ ಬಹುತೇಕರು ಕೋವಿಡ್‌ಗೆ ಚಿಕಿತ್ಸೆ ಪಡೆದವರು. ತೀವ್ರ ಮಧುಮೇಹದಿಂದ ಬಳಲುತ್ತಿದ್ದ ರೋಗಿಗಳನ್ನು ಇದು ಬಾಧಿಸಿದೆ. ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಚಳ್ಳಕೆರೆ ರಸ್ತೆಯಲ್ಲಿರುವ ಡಾ.ಪ್ರಹ್ಲಾದ್‌ ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

‘ಕಪ್ಪು ಶಿಲೀಂದ್ರ ಪ್ರಕರಣ ಸಾಂಕ್ರಾಮಿಕವಲ್ಲ. ಇದು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದಿಲ್ಲ. ಸಾರ್ವಜನಿಕರು ಗಾಬರಿ ಆಗುವ ಅಗತ್ಯವಿಲ್ಲ. ಈ ರೋಗಿಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಎಲ್ಲರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್‌.ಫಾಲಾಕ್ಷ ತಿಳಿಸಿದ್ದಾರೆ.

ಇದನ್ನೂ ಓದಿ :ರೈತರಿಗೆ ಸಹಕಾರಿ ಸಾಲದ ಕಂತು ತುಂಬಲು ಜೂನ್‌ 30ರ ವರೆಗೆ ಅವಕಾಶ

Advertisement

Udayavani is now on Telegram. Click here to join our channel and stay updated with the latest news.

Next