Advertisement
ಕ್ಲೀನ್ ಬೆಂಗಳೂರು ಅಭಿಯಾನ, ವಾರ್ಡ್‌ವಾರು ಕಾಂಪೋಸ್ಟ್ ಸಂತೆ, ಇ-ಶೌಚಾಲಯ, ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ ಸೇರಿದಂತೆ ಹಲವು ಕಾರ್ಯಕ್ರಮಗಳ ಮೂಲಕ ಈ ಬಾರಿಯ ಅಭಿಯಾನದಲ್ಲಿ ಉತ್ತಮ ರ್‍ಯಾಂಕಿಂಗ್ ಪಡೆಯುವ ಭರವಸೆಯನ್ನು ಪಾಲಿಕೆ ಹೊಂದಿತ್ತು. ಆದರೆ, ಶನಿವಾರ ಘೋಷಣೆಯಾಗಿರುವ ಪಟ್ಟಿಯಲ್ಲಿ ಬಿಬಿಎಂಪಿಗೆ ಹಿನ್ನಡೆಯಾಗಿದೆ.
Related Articles
Advertisement
ಅಭಿಯಾನದಿಂದ ದೂರ: ಕೇಂದ್ರದಿಂದ ಆಯೋಜಿಸುತ್ತಿರುವ ಸ್ವತ್ಛ ಸರ್ವೇಕ್ಷನ್‌ನಲ್ಲಿ ಪ್ರತಿ ಬಾರಿ ಬೆಂಗಳೂರಿಗೆ ಕಳಪೆ ಸ್ಥಾನ ದೊರೆಯುವುದು ಅನುಮಾನಗಳಿಗೆ ಕಾರಣವಾಗಿದ್ದು, ಮುಂದಿನ ವರ್ಷದಿಂದ ಅಭಿಯಾನದಲ್ಲಿ ಭಾಗವಹಿಸದಿರುವ ಕುರಿತು ಪಾಲಿಕೆ ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ. ಜತೆಗೆ ಸರ್ವೇಕ್ಷನ್‌ಗೆ ಪರ್ಯಾಯವಾಗಿ ರಾಜ್ಯಮಟ್ಟದಲ್ಲಿಯೇ ಅಭಿಯಾನ ನಡೆಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಿಬಿಎಂಪಿಗೆ ಮಾರಕವಾದ ಅಂಶವೇನು?: ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆಯಂತೆ ನಗರಗಳು ಸಂಪೂರ್ಣವಾಗಿ “ಬಯಲು ಶೌಚ ಮುಕ್ತ’ ಎಂದು ಘೋಷಿಸಿಕೊಳ್ಳಬೇಕು. ರ್‍ಯಾಂಕಿಂಗ್ ನೀಡುವ ವೇಳೆಯಲ್ಲಿಯೂ ಇದೇ ಅಂಶವನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಲಾಗುತ್ತದೆ.
ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿನ 198 ವಾರ್ಡ್‌ಗಳ ಪೈಕಿ ಈವರೆಗೆ ಯಾವುದೇ ವಾರ್ಡ್ ಅಧಿಕೃತವಾಗಿ ಬಯಲು ಶೌಚ ಮುಕ್ತವಾಗಿಲ್ಲ. ಸಮೀಕ್ಷೆ ಆರಂಭವಾದ ಹಿನ್ನೆಲೆಯಲ್ಲಿ ಸುಮಾರು 100 ವಾರ್ಡ್‌ಗಳು ಬಯಲು ಶೌಚ ಮುಕ್ತವಾಗಿದೆ ಎಂಬ ಪ್ರಸ್ತಾವನೆಯನ್ನು ಪಾಲಿಕೆಯ ಕೌನ್ಸಿಲ್ ಮುಂದಿಟ್ಟರೂ, ಈವರೆಗೆ ಅನುಮೋದನೆ ಸಿಕ್ಕಿಲ್ಲ.
ಹಲವು ಕಾರ್ಯಕ್ರಮಗಳನ್ನು ರೂಪಿಸಿದರೂ ಬೆಂಗಳೂರಿಗೆ ಉತ್ತಮ ರ್‍ಯಾಂಕಿಂಗ್ ದೊರೆಯದಿರುವುದು ಬೇಸರ ತಂದಿದೆ. ಯಾವ ಕಾರಣದಿಂದ ಬೆಂಗಳೂರಿಗೆ ಕಡಿಮೆ ರ್‍ಯಾಂಕ್ ಬಂದಿದೆ ಎಂಬ ಕುರಿತು ಮಾಹಿತಿ ನೀಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆಯಲಾಗುವುದು.-ಆರ್.ಸಂಪತ್ ರಾಜ್, ಮೇಯರ್