Advertisement

ಭಾರತ; 24ಗಂಟೆಯಲ್ಲಿ 21,880 ಕೋವಿಡ್ ಪ್ರಕರಣ ಪತ್ತೆ, 1.5 ಲಕ್ಷದ ಸನಿಹಕ್ಕೆ ಸಕ್ರಿಯ ಪ್ರಕರಣ

11:24 AM Jul 22, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 21,880 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,38,47,065ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜುಲೈ 22) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ದನ್ನೂ ಓದಿ:ದ್ರೌಪದಿ ಮುರ್ಮು ಅವರಿಗೆ ದಾಖಲೆ ಮತದ ಗೆಲುವು: ನಳಿನ್‍ ಕುಮಾರ್ ಕಟೀಲ್ ಅಭಿನಂದನೆ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,49,482ಕ್ಕೆ ತಲುಪಿದೆ.  ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 60 ಜನರು ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,930ಕ್ಕೆ ಏರಿಕೆಯಾಗಿದೆ.

24ಗಂಟೆಯಲ್ಲಿ 601 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ 98.46ರಷ್ಟಿದೆ. 2020ರ ಆಗಸ್ಟ್ ನಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ 20 ಲಕ್ಷ ದಾಟಿತ್ತು. 2022ರ ಜನವರಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ ದಾಟಿರುವುದಾಗಿ ಅಂಕಿಅಂಶ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next