Advertisement

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ಸೋಂಕಿಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 22 ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,282 ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯ ಹಲವೆಡೆ ಕೋವಿಡ್‌ ಆಸ್ಪತ್ರೆ ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಂದು 14 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬುಧವಾರ ಒಟ್ಟು 2414 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಈವರೆಗೆ 68 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ

ಸೋಂಕಿತರ ಪೈಕಿ ಈಗಾಗಲೆ 14,146 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 68 ಸಕ್ರಿಯ ಪ್ರಕರಣಗಳಿವೆ. ಒಟ್ಟು 1,13,841 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 2,18,612 ಜನರ ಮಾದರಿ ಸಂಗ್ರಹಿಸಲಾಗಿದ್ದು, 2,02,744 ಜನರ ವರದಿ ನೆಗೆಟಿವ್‌ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next