ನವದೆಹಲಿ : ಪಶ್ಚಿಮ ದೆಹಲಿಯ ತಿಲಕ್ ನಗರದಲ್ಲಿ ಜಗಳದ ನಂತರ 12 ನೇ ತರಗತಿಯ ಬಾಲಕಿಯನ್ನು 22 ವರ್ಷದ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇವರಿಬ್ಬರು ಸಮೀಪದ ನಿವಾಸಿಗಳಾಗಿದ್ದು, ಕಳೆದ ಎರಡು ಮೂರು ವರ್ಷಗಳಿಂದ ಸ್ನೇಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ಆರೋಪಿಯೊಂದಿಗೆ ವಾಗ್ವಾದಕ್ಕಿಳಿದ ನಂತರ ಆತ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನು ಗುರುತಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಘನಶ್ಯಾಮ್ ಬನ್ಸಾಲ್ ಹೇಳಿದ್ದಾರೆ.
ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ವಾಗ್ವಾದ ಮತ್ತು ನಂತರದ ಚೂರಿ ಇರಿತದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.