Advertisement

ದೆಹಲಿ: ನೇಣುಹಾಕಿದ ಸ್ಥಿತಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆ

02:28 PM Mar 05, 2021 | Team Udayavani |

ನವದೆಹಲಿ: 22 ವರ್ಷದ ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ದೆಹಲಿಯ ಮನೆಯೊಂದರಲ್ಲಿ ನಡೆದಿರುವುದಾಗಿ ಶುಕ್ರವಾರ(ಮಾರ್ಚ್ 05) ಪೊಲೀಸರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಟೆಸ್ಲಾ ‘ಎಲೆಕ್ಟ್ರಿಕ್ ಕಾರು’ ಉತ್ಪಾದನೆಗೆ ಪಾಲುದಾರಿಕೆಯಿಲ್ಲ..ಟಾಟಾ ಮೋಟಾರ್ಸ್ ಸ್ಪಷ್ಟನೆ

ದೆಹಲಿಯ ಶಕುರ್ ಪುರ್ ಪ್ರದೇಶದಲ್ಲಿ ಗುರುವಾರ(ಮಾರ್ಚ್ 04) ಈ ಘಟನೆ ನಡೆದಿದ್ದು, ರಾತ್ರಿ 10.40ಕ್ಕೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು ಎಂದು ವರದಿ ತಿಳಿಸಿದೆ.

ಪತಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದು, ಪತಿ ಮನೆಗೆ ವಾಪಸ್ ಬಂದಾಗ ಮೂವರು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಕಂಡು ಬಂದಿದ್ದು, ಕೂಡಲೇ ಸ್ಥಳೀಯರ ನೆರವಿನೊಂದಿಗೆ ಬಾಗಿಲು ಒಡೆದು ಒಳಗೆ ಹೋಗಿರುವುದಾಗಿ ವಿವರಿಸಿದ್ದಾರೆ.

ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವುದಾಗಿ  ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next