Advertisement

ಎಲ್ಲರೂ ಏಕಪತ್ನಿ ವ್ರತಸ್ಥರಾ?; 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಲಿ: ಸುಧಾಕರ್

04:09 PM Mar 24, 2021 | Team Udayavani |

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಸುಧಾಕರ್, ಎಲ್ಲರೂ ಏಕಪತ್ನಿ ವ್ರತಸ್ಥರಾ? 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆಯೂ ತನಿಖೆಯಾಗಲಿ ಎಂದು ಹೇಳಿ ವಿವಾದಕ್ಕೀಡಾಗಿದ್ದಾರೆ.

Advertisement

ರಮೇಶ್ ಕುಮಾರ್, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಬಿ.ಮುನಿಯಪ್ಪ ಹಾಗೂ ಕುಮಾರಸ್ವಾಮಿಯವರು ಸತ್ಯಹರಿಶ್ಚಂದ್ರರಲ್ಲವೇ? ಏಕ ಪತ್ನಿ ವ್ರತಸ್ಥರಾಗಿ ಸಮಾಜಕ್ಕೆ ಮಾದರಿಯಾಗಿದ್ದಾರಲ್ಲವೇ? ಆದರೆ 224 ಶಾಸಕರ ಬಗ್ಗೆಯೂ ತನಿಖೆಯಾಗಲಿ, ಎಲ್ಲರ ಬಂಡವಾಳ ಬಯಲಿಗೆ ಬರಲಿ ಎಂದು ಸುಧಾಕರ್ ಸವಾಲು ಹಾಕಿದ್ದರು.

ಬುಧವಾರ(ಮಾರ್ಚ್ 24) ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾರೆಲ್ಲಾ ಮುಖ್ಯಮಂತ್ರಿಯಾಗಿದ್ದಾಗ ಏನೆಲ್ಲಾ ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಲಿ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸತ್ಯಹರಿಶ್ಚಂದ್ರರು ಎಂದು ಹೇಳಿಕೊಳ್ಳುತ್ತಾರಲ್ಲ. ಅವರಿಗೆ ನಾನು ಸವಾಲು ಹಾಕುತ್ತೇನೆ. 224 ಶಾಸಕರು ತನಿಖೆ ಎದುರಿಸಲಿ. ಎಷ್ಟು ಮಂದಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂಬುದು ಬಹಿರಂಗವಾಗಲಿ ಎಂದು ಹೇಳಿದರು.

ಏಕಪತ್ನಿ ವ್ರತಸ್ಥರು…ವಿಷಾದ ವ್ಯಕ್ತಪಡಿಸಿದ ಸುಧಾಕರ್:

ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ.(2/2)

Advertisement

— Dr Sudhakar K (@mla_sudhakar) March 24, 2021


ಕೆಲವು ನಾಯಕರು ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ, ಬೇರೆ ಆಯಾಮ ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ. ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ಧ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವುಂಟು ಮಾಡುವ ಉದ್ದೇಶ ನನಗಿಲ್ಲ ಎಂದು ಡಾ.ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next