ಹೊಸದಿಲ್ಲಿ: ಹಿಮಾಚಲ ಪ್ರದೇಶ ಸೇರಿ ಉತ್ತರಭಾರತದಾದ್ಯಂತ ಭಾರೀ ಪ್ರಮಾಣದಲ್ಲಿ ಹಿಮಪಾತ ಉಂಟಾಗಿದೆ. ಹಿಮಾಚಲ ಪ್ರದೇಶದಲ್ಲಿ ಹಿಮಪಾತದಿಂದಾಗಿ ನಾಲ್ವರು ಅಸುನೀಗಿದ್ದಾರೆ.
ಜತೆಗೆ 3 ರಾಷ್ಟ್ರೀಯ ಹೆದ್ದಾರಿಗಳು ಸೇರಿ 226 ರಸ್ತೆಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಮಪಾತದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹಿಮಪಾತದ ಹಿನ್ನೆಲೆಯಲ್ಲಿ ಮನಾಲಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.
ತಾಬೋ ಎಂಬಲ್ಲಿ ತಾಪಮಾನ -10.6 ಡಿಗ್ರಿ ಸೆ.ಗೆ ಕುಸಿದಿದೆ.
ಜಮ್ಮು-ಕಾಶ್ಮೀರ, ರಾಜಸ್ಥಾನ, ಪಂಜಾಬ್, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ತಾಪಮಾನ ಕುಸಿತ ಕಂಡಿದೆ. ಮುಂದಿನ 2 ದಿನಗಳಲ್ಲಿ ಕಾಶ್ಮೀರದಲ್ಲಿ ತಾಪಮಾನ 2-3 ಡಿಗ್ರಿಗಳಷ್ಟು ಕುಸಿಯಲಿದೆ ಎಂದು ತಜ್ಞರು ಮುನ್ನೆಚ್ಚರಿಕೆ ನೀಡಿದ್ದಾರೆ.