Advertisement

228 ಕೋವಿಡ್ 19 ವರದಿ ಬಾಕಿ

03:53 PM Apr 25, 2020 | Suhan S |

ಗದಗ: ಜಿಲ್ಲೆಯಲ್ಲಿ ಕೋವಿಡ್ 19 ಗೆ ಸಂಬಂಧಿಸಿ ಇಂದಿನ 78 ಸೇರಿದಂತೆ 228 ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

Advertisement

ಸೋಂಕಿನ ಪರೀಕ್ಷೆಗಾಗಿ ಒಟ್ಟು 916 ಮಾದರಿಗಳನ್ನು ಸಂಗ್ರಹಿಸಿದ್ದು, 641 ಮಾದರಿಗಳು ನಕಾರಾತ್ಮಕವಾಗಿವೆ. 43 ವರದಿಗಳು ತಿರಸ್ಕೃತಗೊಂಡಿವೆ. ಜಿಲ್ಲೆಯಲ್ಲಿ ಇಂದಿನ 79 ಸೇರಿದಂತೆ ಇಲ್ಲಿವರೆಗೆ 939 ಜನರನ್ನು ನಿಗಾಕ್ಕೆ ಒಳಪಡಿಸಲಾಗಿದೆ. ಈ ಪೈಕಿ 193 ಜನರು 28 ದಿನಗಳ ನಿಗಾ ಅವಧಿ  ಪೂರೈಸಿದ್ದಾರೆ. 712 ಜನರು ಮನೆಯಲ್ಲಿ 33 ಜನರು ವೈದ್ಯಕೀಯ ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next