ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನ ಕೇವಾಡಿಯಾಕ್ಕೆ ಆರೋಗ್ಯ ವನ ಉದ್ಘಾಟಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ಶುಕ್ರವಾರ(ಅಕ್ಟೋಬರ್ 30,2020) ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತಿನ ಕೇವಾಡಿಯಾ ಗ್ರಾಮದಲ್ಲಿರುವ ಏಕತಾ ಪ್ರತಿಮೆ ಸ್ಮಾರಕ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮತ್ತು ಶನಿವಾರ ಭೇಟಿ ನೀಡಲಿರುವ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಿಂದ ಐದು ಸಾವಿರಕ್ಕೂ ಅಧಿಕ ಪೊಲೀಸರು ಮತ್ತು ರಾಜ್ಯ ಮೀಸಲು ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರದಿಂದ ಎರಡು ದಿನಗಳ ಕಾಲ ಗುಜರಾತ್ ಭೇಟಿ ನಿಗದಿಯಾಗಿದ್ದು, ಇಂದು ಕೇವಾಡಿಯಾಕ್ಕೆ ಆಗಮಿಸಿ ಆರೋಗ್ಯ ವನ ಉದ್ಘಾಟಿಸಿದ್ದರು. ಮೋದಿ ಅವರು ಶನಿವಾರ ಮಧ್ಯಾಹ್ನದವರೆಗೆ ಗುಜರಾತ್ ನಲ್ಲಿರಲಿದ್ದಾರೆ ಎಂದು ವರದಿ ಹೇಳಿದೆ.
ಇದನ್ನೂ ಓದಿ:ಪುಲ್ವಾಮಾ ದಾಳಿ ಕುರಿತಂತೆ ಕಾಂಗ್ರೆಸ್ ಪಕ್ಷ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು: ಜಾವ್ಡೇಕರ್
ಪ್ರಕಟಣೆಯ ಪ್ರಕಾರ, ಗುರುವಾರ ಸುಮಾರು 3,651 ಪೊಲೀಸ್ ಸಿಬ್ಬಂದಿಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಇವರಲ್ಲಿ 23 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದೆ.